Advertisement

ವಿಚಾರಣಾಧೀನ ಕೈದಿ ಶಂಕಾಸ್ಪದ ಸಾವು

11:37 PM Jun 30, 2019 | Lakshmi GovindaRaj |

ರಾಯಚೂರು: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧಿಧೀನ ಕೈದಿ ಮಹ್ಮದ್‌ ಶಫಿ (25) ಭಾನುವಾರ ಮೃತಪಟ್ಟಿದ್ದು, ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ಪಾಲಕರು ಪ್ರತಿಭಟನೆ ನಡೆಸಿದರು. ಸ್ನೇಹಿತನನ್ನು ಕೊಲೆಗೈದ ಆರೋಪದಡಿ ಫೆ.2ರಂದು ಜೈಲಿಗೆ ಕಳುಹಿಸಲಾಗಿತ್ತು.

Advertisement

ಎದೆ ನೋವು ಕಾಣಿಸಿಕೊಂಡ ಕಾರಣ ಭಾನುವಾರ ಬೆಳಗ್ಗೆ ರಿಮ್ಸ್‌ಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಯಾವುದೇ ತೊಂದರೆ ಇಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದರು. ಮಧ್ಯಾಹ್ನ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದು ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದೆ.

ಆದರೆ, ಇದನ್ನು ತಳ್ಳಿ ಹಾಕಿರುವ ಪಾಲಕರು ತಮ್ಮ ಮಗ ಜೈಲಿನಲ್ಲಿಯೇ ಮೃತಪಟ್ಟಿದ್ದು, ಆಮೇಲೆ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಕೆಲ ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಆತನಿಗೆ ಜೈಲಿನ ಅಧಿಕಾರಿ ಸರಿಯಾಗಿ ಚಿಕಿತ್ಸೆ ಕೊಡಿಸಿಲ್ಲ.

ನಾವು ಬರುವಷ್ಟರಲ್ಲಿಯೇ ಮಗನ ದೇಹ ಶವಾಗಾರದಲ್ಲಿಟ್ಟಿದ್ದರು. ನ್ಯಾಯ ಸಿಗುವವರೆಗೆ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಈ ಕುರಿತು ಪ್ರತಿಕ್ರಿಯಿಸಿರುವ ಎಸ್‌ಪಿ ಡಾ| ಸಿ.ಬಿ.ವೇದಮೂರ್ತಿ, ಶವಪರೀಕ್ಷೆ ಬಳಿಕ ಸತ್ಯಾಂಶ ಗೊತ್ತಾಗಲಿದೆ. ಪಾಲಕರ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next