Advertisement

ಡಿವೈಎಸ್‌ಪಿ ಗಣಪತಿ ಸಾವು ಅರ್ಜಿ ವಿಚಾರಣೆ ಮುಂದಕ್ಕೆ

03:45 AM Feb 21, 2017 | Team Udayavani |

ಉದಯವಾಣಿ ದೆಹಲಿ ಪ್ರತಿನಿಧಿ: ರಾಜ್ಯಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅವರ ತಂದೆ ಎಂ.ಕೆ.ಕುಶಾಲಪ್ಪಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಎರಡು ವಾರ ಮುಂದೂಡಿದೆ.

Advertisement

ಪ್ರಕರಣದಲ್ಲಿನ ದೂರುದಾರರಾದ ಕುಶಾಲಪ್ಪಪರ ವಕೀಲರು ವಾದ ಮಂಡನೆಗೆ ಸಮಯ ಕೋರಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎ. ಕೆ. ಗೊಯೆಲ್‌ ಮತ್ತು ನ್ಯಾ|ಯು.ಲಲಿತ್‌ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು. ಈ ಹಿಂದಿನ ವಿಚಾರಣೆಯಲ್ಲಿ ರಾಜ್ಯಕ್ಕೆ ನೋಟಿಸ್‌ ನೀಡಿದ್ದ ಸುಪ್ರೀಂ ಕೋರ್ಟ್‌ ಎರಡು ವಾರದೊಳಗೆ ನೋಟಿಸ್‌ಗೆ ಪ್ರತಿಕ್ರಿಯಿಸುವಂತೆ ಹೇಳಿದೆ.

ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್‌, ಹಿರಿಯ ಪೊಲೀಸ್‌ ಅಧಿಕಾರಿಗಳಾದ ಎ.ಎಂ.ಪ್ರಸಾದ್‌, ಪ್ರಣವ್‌ ಮೊಹಂತಿ ಮುಂತಾದವರ ಹೆಸರು ಉಲ್ಲೇಖಗೊಂಡಿದ್ದು ಸಿಐಡಿಯಿಂದ ಮುಕ್ತ ತನಿಖೆ ಸಾಧ್ಯವಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಮೃತ ಗಣಪತಿ ತಂದೆ ಕುಶಾಲಪ್ಪ ಅವರ ಬೇಡಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next