Advertisement

ವಂಡಾರು; ಸಿಡಿಲು ಬಡಿದು ಸಾಫ್ಟ್‌ವೇರ್ ಉದ್ಯೋಗಿ ಯುವಕ‌ ಸಾವು

11:01 PM Dec 10, 2020 | mahesh |

ಕೋಟ: ಸಿಡಿಲು‌ ಬಡಿದು‌ ಯುವಕನೋರ್ವ ಸಾವನ್ನಪ್ಪಿದ ಘಟನೆ ವಂಡಾರಿನ ಬೋರ್ಡಕಲ್ಲಿನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಸ್ಥಳೀಯ ನಿವಾಸಿ‌ ಸಾಫ್ಟ್ ವೇರ್ ಇಂಜಿನಿಯರ್ ಚೇತನ್ (24) ಮೃತಪಟ್ಟ ಯುವಕ.

Advertisement

ಮನೆಯೊಳಗಡೆ ಲ್ಯಾಪ್‌ಟಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭ ಸಿಡಿಲಿನ‌ ಹೊಡೆತಕ್ಕೆ ಒಳಗಾಗಿ ಗಂಭೀರವಾಗಿ ಅಸ್ವಸ್ಥತಗೊಂಡಿದ್ದು ತತ್ ಕ್ಷಣ ಆತನನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆ ಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಚೇತನ್ ಮೃತಪಟ್ಟಿರುವುದಾಗಿ ತಿಳಿಸಿದರು.

ಈತ ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯಾಗಿದ್ದು ಕೊರೊನಾ ಸಮಸ್ಯೆಯ ಅನಂತರ ಹಲವು ತಿಂಗಳಿಂದ ಮನೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದ.‌ ಈತನದ್ದು ತೀರಾ ಬಡತನದ ಕುಟುಂಬವಾಗಿದ್ದು ಸಾಕಷ್ಟು ಕಷ್ಟಪಟ್ಟು ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಹಾಗೂ ಮನೆಗೆ ಆಧಾರವಾಗಿದ್ದ. ಮೃತನು ತಂದೆ,ತಾಯಿ, ಸಹೋದರಿಯನ್ನು ಕಳೆದು ಅಗಲಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next