Advertisement

ವಿದ್ಯಾರ್ಥಿಗಳ ಸಾವು: ಎಸಿ ನೇತೃತ್ವದ ತನಿಖೆ

12:51 PM Aug 23, 2019 | Team Udayavani |

ಕೊಪ್ಪಳ: ಐವರು ವಿದ್ಯಾರ್ಥಿಗಳಿಗೆ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಪ್ರಕರಣವನ್ನು ಶೀಘ್ರ ತನಿಖೆ ನಡೆಸಿ ರಾಜ್ಯ ಸರ್ಕಾರಕ್ಕೆ ವರದಿ ನೀಡುವಂತೆ ಮುಖ್ಯಮಂತ್ರಿಗಳ ಕಚೇರಿಯಿಂದ ಆದೇಶ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸುನೀಲ್ ಕುಮಾರ ಅವರು ಎಸಿ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

Advertisement

ಕೊಪ್ಪಳ ಡಿ. ದೇವರಾಜ ಅರಸು ಮೆಟ್ರಿಕ್‌ ಪೂರ್ವ ವಸತಿ ನಿಲಯದಲ್ಲಿ ಇತ್ತೀಚೆಗೆ ಧ್ವಜಾರೋಹಣ ನೆರವೇರಿಸಿದ ಕಂಬವನ್ನು ತೆರವು ಮಾಡಲು ಐವರು ವಿದ್ಯಾರ್ಥಿಗಳು ಮುಂದಾಗಿ ದ್ದರು. ಧ್ವಜಸ್ತಂಬ ವಿದ್ಯುತ್‌ ತಂತಿಗೆ ಸ್ಪರ್ಶಿಸಿ ಐವರು ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿದ್ದರು. ವಿದ್ಯಾರ್ಥಿಗಳ ಸಾವು ರಾಜ್ಯ ಸೇರಿದಂತೆ ದೇಶದಲ್ಲಿ ಸದ್ದು ಮಾಡಿತ್ತು. ಹಾಸ್ಟೆಲ್ಗಳ ದುಸ್ಥಿತಿ, ವಿದ್ಯಾರ್ಥಿಗಳಿಗೆ ಭದ್ರತೆ ಇಲ್ಲದೇ ಇರುವ ಕುರಿತು ರಾಜ್ಯವ್ಯಾಪಿ ಚರ್ಚೆಯಾಗಿತ್ತು. ಇದರಿಂದ ರಾಜ್ಯ ಸರ್ಕಾರವು ಎಚ್ಚೆತ್ತು ಪ್ರಕರಣ ತನಿಖೆ ನಡೆಸುವ ಜೊತೆಗೆ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಹಣವನ್ನು ಜಿಲ್ಲಾಧಿಕಾರಿ ಪಿಡಿ ಖಾತೆಯಿಂದ ಅಂದೇ ಹಸ್ತಾಂತರ ಮಾಡಲಾಯಿತು.

ಅಲ್ಲದೇ, ಮುಖ್ಯಮಂತ್ರಿಗಳ ಕಚೇರಿಯಿಂದ ಜಿಲ್ಲಾಧಿಕಾರಿ ಸುನೀಲ್ ಕುಮಾರ ಅವರಿಗೆ ಸೂಚನೆ ನೀಡಿ, ಕೇವಲ 10 ದಿನದಲ್ಲಿ ಮೃತ ವಿದ್ಯಾರ್ಥಿಗಳ ಸಾವಿನ ಪ್ರಕರಣದ ಸಮಗ್ರ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಆದೇಶ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಎಸಿ ಸಿ.ಡಿ. ಗೀತಾ ನೇತೃತ್ವದ ಸಮಿತಿ ಮಾಡಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ. ಎಸಿ ವರದಿ ಹಾಗೂ ಜೆಸ್ಕಾಂನಿಂದ ಬಂದ ವರದಿ ಬಂದ ಬಳಿಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next