Advertisement
ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಕೊರೊನಾದಿಂದ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ಹೆಚ್ಚಿನ ಜನರನ್ನು ರೋಗದಿಂದ ಮುಕ್ತರನ್ನಾಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಮತ್ತು ಸಾವಿನ ಪ್ರಮಾಣ ಹೆಚ್ಚುತ್ತಿರುವಾಗ ಉದ್ಧವ್ ಅವರು ಮನೆಯಲ್ಲಿಯೇ ಕುಳಿತು ದೂರಸಂಪರ್ಕದ ಮೂಲಕ ರಾಜ್ಯವನ್ನು ನಿರ್ವಹಿಸುತ್ತಿದ್ದಾರೆ. ಮುಖ್ಯಮಂತ್ರಿ ಅವರೇ ಮನೆಯಲ್ಲಿ ಕುಳಿತಿರುವುದರಿಂದ ಅಧಿಕಾರಿಗಳ ಮೇಲೆ ಯಾವುದೇ ಒತ್ತಡವಿಲ್ಲ. ಇದರ ಪರಿಣಾಮವಾಗಿ ರಾಜ್ಯವು ಎಲ್ಲ ಕ್ಷೇತ್ರ ಗಳಲ್ಲಿ ಹಿಂದುಳಿದಿದೆ ಎಂದರು. Advertisement
ಸಾವಿನ ಪ್ರಮಾಣ ಹೆಚ್ಚಾಗುತ್ತಿದ್ದರೂ ಸರಕಾರ ಗಂಭೀರವಾಗಿಲ್ಲ: ರಾಣೆ
12:49 PM Aug 06, 2020 | mahesh |
Advertisement
Udayavani is now on Telegram. Click here to join our channel and stay updated with the latest news.