Advertisement

12ರಂದು ಸವಿತಾ ಮಹರ್ಷಿ ಜಯಂತಿ ಆಚರಣೆಗೆ ನಿರ್ಧಾರ

05:25 AM Feb 02, 2019 | Team Udayavani |

ಹೊನ್ನಾಳಿ: ಸವಿತಾ ಮಹರ್ಷಿ ಜಯಂತ್ಯುತ್ಸವವನ್ನು ಫೆ. 12ರಂದು ಪ.ಪಂ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ತಹಶೀಲ್ದಾರ್‌ ತುಷಾರ ಬಿ.ಹೊಸೂರು ಹೇಳಿದರು.

Advertisement

ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗೂ ತಾಲೂಕು ಸವಿತಾ ಸಮಾಜ ಸಂಯುಕ್ತಾಶ್ರಯದಲ್ಲಿ ತಾಲೂಕು ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತ್ಯುತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಸವಿತಾ ಮಹರ್ಷಿ ಜಯಂತಿ ಆಚರಣೆಗೆ ಅಧಿಕೃತ ಘೋಷಣೆಯಾಗಿದೆ. ಸಮಾಜದ ಬಾಂಧವರು ಈ ಬಾರಿ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಗೆ ಒಪ್ಪಿಗೆ ನೀಡಿದ್ದು, ಸರಳ, ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಎನ್‌.ಎಲ್‌. ರವಿ ಮಾತನಾಡಿ, ಸರ್ಕಾರ ಸವಿತಾ ಸಮಾಜವನ್ನು ಗುರ್ತಿಸಿ ದಾರ್ಶನಿಕ ಸವಿತಾ ಮಹರ್ಷಿ ಜಯಂತಿಗೆ ಚಾಲನೆ ನೀಡಿರುವುದಕ್ಕೆ ಅಭಿನಂದಿಸಿದರು. ಪ್ರಥಮ ಬಾರಿಗೆ ಸರ್ಕಾರದ ವತಿಯಿಂದ ಆಚರಿಸುವ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಸಮಾಜದ ಎಲ್ಲಾ ಬಾಂಧವರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ವಿನಂತಿಸಿದರು. ಸವಿತಾ ಸಮಾಜದ ನಿರ್ದೇಶಕರಾದ ಗೋವಿಂದರಾಜ್‌, ಎನ್‌.ಕೆ.ತಿಪ್ಪಣ್ಣ, ಎನ್‌.ಆರ್‌. ಕೃಷ್ಣಮೂರ್ತಿ, ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next