Advertisement

ಸೇವಾಲಾಲ್‌ ಜಯಂತಿ ಆಚರಣೆಗೆ ನಿರ್ಧಾರ

05:26 PM Feb 07, 2018 | |

ಯಾದಗಿರಿ: ಜಿಲ್ಲಾಡಳಿತ ಮತ್ತು ಇತರೆ ಇಲಾಖೆಗಳ ಸಹಯೋಗದಲ್ಲಿ ಸಂತ ಶ್ರೀ ಸೇವಾಲಾಲ್‌ ಅವರ ಪ್ರಥಮ ಜಯಂತಿಯನ್ನು ಫೆ. 15ರಂದು ಬೆಳಗ್ಗೆ 11:00 ಗಂಟೆಗೆ ನಗರದ ವಿದ್ಯಾ ಮಂಗಲ ಕಾರ್ಯಾಲಯದಲ್ಲಿ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಯಿತು.

Advertisement

ನಗರದ ಜಿಪಂ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿಲ್ಲೆಯ ಎಲ್ಲಾ ಸರಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿ, ಕಚೇರಿಗಳಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಸಂತ ಶ್ರೀ ಸೇವಾಲಾಲ ಅವರ ಜಯಂತಿಯನ್ನು ಆಚರಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು. 

ಕಾಯಕ್ರಮಕ್ಕಾಗಿ ವೇದಿಕೆ, ಮೈಕ್‌, ಬ್ಯಾಕಡ್ರಾಪ್‌, ಖುರ್ಚಿಗಳು ಹಾಗೂ ಸೌಂಡ್‌ ಸಿಸ್ಟಮ್‌ ಗಳನ್ನು ಕಲ್ಪಿಸಲು ನಗರಸಭೆ ಪೌರಾಯುಕ್ತರಿಗೆ, ಕಾರ್ಯಕ್ರಮದ ಉಪನ್ಯಾಸ ನೀಡಲು ನುರಿತ ಉಪನ್ಯಾಸಕರು ಹಾಗೂ ನಿರೂಪಣೆಕಾರರನ್ನು ಕರೆಯಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಲಾಯಿತು.
 
ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ವಿತರಿಸುವ ವ್ಯವಸ್ಥೆ ಹಾಗೂ ಕಾರ್ಯಕ್ರಮದ ಪೂರ್ಣ ಜವಾಬ್ದಾರಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ವಹಿಸಲಾಯಿತು. ವೇದಿಕೆ ಮೇಲೆ ಹೂವು ದಾನಿಗಳಿಂದ ಅಲಂಕಾರ ಮಾಡಲು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಲಾಯಿತು.

ಕಾರ್ಯಕ್ರಮದ ಮೆರವಣಿಗೆ ಬೆಳಗ್ಗೆ 09:00ಗಂಟೆಗೆ ಪ್ರಾರಂಭವಾಗಿ 11:00ಗಂಟೆವರೆಗೆ ಪದವಿ ಮಹಾವಿದ್ಯಾಲಯದಿಂದ ಸುಭಾಷ್‌ ವೃತ್ತದ ಮಾರ್ಗವಾಗಿ ವಿದ್ಯಾಮಂಗಲದ ಕಾರ್ಯಾಲಯದವರೆಗೆ ನಡೆಸಲು ಸಂತ ಶ್ರೀ ಸೇವಾಲಾಲ ಜಯಂತ್ಯುತ್ಸವ ಸಂಘದವರು ಮನವಿ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳು ಅನುಮತಿ ನೀಡಿದರು.

ಸೂಕ್ತ ಪೊಲೀಸ್‌ ಬಂದೋಬಸ್ತ್ ಇನ್ನಿತರ ಅಗತ್ಯ ಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿತು. ಕಾರ್ಯಕ್ರಮದ ನೋಡಲ್‌ ಅಧಿಕಾರಿಯಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ನೇಮಿಸಲಾಯಿತು.

Advertisement

ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷ ಬಾಷು ಎಸ್‌. ರಾಠೊಡ್‌, ನಗರಸಭೆ ಪೌರಾಯುಕ್ತ ಸಂಗಪ್ಪ ಉಪಾಸೆ, ಬಂಜಾರ ಸಮಾಜದ ಜಿಲ್ಲಾಧ್ಯಕ್ಷ ಕೀಶನ್‌ ರಾಠೊಡ್‌ ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇನ್ನಿತರ ಜಿಲ್ಲಾ ಸಮಾಜದ ಮುಖಂಡರು ಸಭೆಯಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next