Advertisement

ಪೆಟ್ರೋಲ್ ದರ ಕಡಿತಗೊಳಿಸಲು ಚಿಂತನೆ; ಮುಖ್ಯಮಂತ್ರಿ ಕುಮಾರಸ್ವಾಮಿ

02:53 PM Sep 10, 2018 | Team Udayavani |

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಅಧಿಕಾರ ಕೇಂದ್ರ ಸರ್ಕಾರದ ಕೈಯಲ್ಲಿ ಇಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದರೆ, ಮತ್ತೊಂದೆಡೆ ರಾಜ್ಯದಲ್ಲಿ ಪೆಟ್ರೋಲ್ ದರ ಕಡಿಮೆ ಮಾಡಲು ಚಿಂತನೆ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಸೋಮವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಕೆ ಮಾಡಲು ಚಿಂತನೆ ನಡೆಸಿದ್ದೇವೆ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು. 

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿಯೇ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಕಡಿಮೆ ಇದೆ. ದಿನಬಳಿಕೆ ವಸ್ತುಗಳ ಮೇಲಿನ ಬೆಲೆ ಹೆಚ್ಚುತ್ತಾ ಹೋದರೆ ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next