Advertisement

“ಸಂಜೆಯೊಳಗೆ ನಿರ್ಧಾರ ಪ್ರಕಟಿಸಲಿ’

03:45 AM Feb 15, 2017 | Harsha Rao |

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿಯಾಗಿರುವ ಕಪ್ಪತಗುಡ್ಡವನ್ನು ಸರ್ಕಾರ ಫೆ.15ರ ಸಂಜೆಯೊಳಗೆ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಬೇಕು. ಇಲ್ಲವೇ ರಾಜ್ಯ ಸರ್ಕಾರವನ್ನು ಪತನಗೊಳಿಸುವ ನಿಟ್ಟಿನಲ್ಲಿ ಜನಾಂದೋಲನ
ನಡೆಸುವುದಾಗಿ ಸಮಾಜ ಪರಿವರ್ತನ ಸಮುದಾಯದ ಮುಖಂಡ ಎಸ್‌.ಆರ್‌. ಹಿರೇಮಠ ಎಚ್ಚರಿಸಿದರು.

Advertisement

ಕಪ್ಪತಗುಡ್ಡ ಸಂರಕ್ಷಣೆಗೆ ಆಗ್ರಹಿಸಿ ನಗರದ ಗಾಂಧಿ ವೃತ್ತದಲ್ಲಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ ಸ್ಥಳದಲ್ಲಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ. ಈ ಹಿಂದೆ ಪ್ರತಿಪಕ್ಷದಲ್ಲಿದ್ದಾಗ ಬಳ್ಳಾರಿ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸಿದ್ದನ್ನು ಮರೆತಿದ್ದಾರೆ.

ಬಳ್ಳಾರಿಯಲ್ಲಿ ರೆಡ್ಡಿಗಳು ಮಾಡಿದ್ದನ್ನೇ ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ. ಕಪ್ಪತಗುಡ್ಡಕ್ಕೆ ನೀಡಿದ್ದ ಸಂರಕ್ಷಿತ ಅರಣ್ಯ ಸ್ಥಾನವನ್ನು 11 ತಿಂಗಳಲ್ಲಿ ಹಿಂಪಡೆದಿರುವುದು ಸಂಶಯ ಮೂಡಿಸಿದೆ ಎಂದರು.

ಫೆ. 15ರಂದು ಸಂಜೆ 5 ಗಂಟೆಯೊಳಗಾಗಿ ಸರ್ಕಾರದ ಪ್ರತಿನಿಧಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಪ್ರತಿಭಟನಾ ಸ್ಥಳಕ್ಕಾಗಮಿಸಿ, ಸರ್ಕಾರದ ನಿಲುವು ಸ್ಪಷ್ಟಪಡಿಸಬೇಕು. ಇಲ್ಲವಾದರೆ, ಮುಂದಿನ ಹೋರಾಟದ ಬಗ್ಗೆ ಬುಧವಾರವೇ ತೀರ್ಮಾನಿಧಿಸಲಾಗುತ್ತದೆ ಎಂದು ಎಚ್ಚರಿಸಿದರು.

ಜನಸಂಗ್ರಾಮ ಪರಿಷತ್‌ ರಾಜ್ಯಾಧ್ಯಕ್ಷ ರಾಘವೇಂದ್ರ ಕುಷ್ಟಗಿ ಮಾತನಾಡಿ, ಕಪ್ಪತಗುಡ್ಡವನ್ನೇ ಪ್ರಧಾನ ವಿಷಯವನ್ನಾಗಿಸಿ ಅಂಬೇಡ್ಕರ್‌ ಜನ್ಮದಿನವಾದ ಏ. 14 ರಿಂದ ಮೇ 1ರವರೆಗೆ ರಾಜ್ಯಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುತ್ತದೆ. ಸಿದ್ದರಾಮಯ್ಯ ಅವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಆರಂಭಧಿಗೊಂಡು ವಿವಿಧ ಜಿಲ್ಲೆಗಳ ಮೂಲಕ ಕಪ್ಪತಗುಡ್ಡ ಇಲ್ಲವೇ ಬಳ್ಳಾರಿಯಲ್ಲಿ ಅಂತ್ಯಗೊಳ್ಳಲಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next