Advertisement

ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಕೋವಿಡ್ ಟೆಸ್ಟ್ ಸಾವಿರಕ್ಕೆ ಏರಿಸಲು ನಿರ್ಧಾರ

12:41 PM Jul 16, 2020 | keerthan |

ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯದಲ್ಲಿ‌ ಕೋವಿಡ್ ಶಂಕಿತರ ಮಾದರಿಗಳ ಪರೀಕ್ಷೆ ಸದ್ಯ ದಿನಕ್ಕೆ 250 ಆಗುತ್ತಿದ್ದು ಅದನ್ನು 1,000 ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಯಿತು.

Advertisement

ಪಶ್ಚಿಮ ವಲಯದ ಕೋವಿಡ್ ಉಸ್ತುವಾರಿಯೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಇರೊಫಿನ್ಸ್ ಕ್ಲಿನಿಕಲ್ ಜೆನೆಟಿಕ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಧಾನಷು ಶ್ರೀವಾಸ್ತವ ಅವರ ಜತೆ ಗುರುವಾರ ಮಾತುಕತೆ ನಡೆಸಿದ ನಂತರ ಈ ವಿಷಯ ತಿಳಿಸಿದರು.

ಇರೊಫಿನ್ಸ್ ಸಂಸ್ಥೆ, ಮಾದರಿಗಳ ಪರೀಕ್ಷೆ ಸಾಮರ್ಥ್ಯವನ್ನು 250ರಿಂದ1000ಕ್ಕೆ ಹೆಚ್ಚಿಸಿಕೊಂಡಿದ್ದು, ನಾಳೆಯಿಂದಲೇ ಈ ಕೆಲಸ ಮಾಡಲಿದೆ ಎಂದು ಹೇಳಿದರು.

ಪಶ್ಚಿಮ ವಲಯದಲ್ಲಿ ಆರು ವಿಧಾನಸಭಾ ಕ್ಷೇತ್ರಗಳು ಇದ್ದು ತಲಾ 150 ಮಾದರಿಗಳನ್ನು ಹೆಚ್ಚುವರಿಯಾಗಿ ಪರೀಕ್ಷೆ ಮಾಡಲಾಗುವುದು. ಇದು ತ್ವರಿತವಾಗಿ ಚಿಕಿತ್ಸೆ ನೀಡಲು ಅನುಕೂಲ ಆಗುತ್ತದೆ ಎಂದರು.

ಬಿಬಿಎಂಪಿ ಪಶ್ಚಿಮ ವಲಯ ಜಂಟಿ‌ ಆಯುಕ್ತ ಚಿದಾನಂದ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಸಭೆಯಲ್ಲಿ ‌ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next