Advertisement
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪ್ರತಿದಿನ ಗುಪ್ತಚರ ಇಲಾಖೆ ವರದಿ ತರಿಸಿಕೊಳ್ಳುತ್ತಿದ್ದು, ಅದರ ವರದಿ ಅವರಿಗೆ ಭಯ ಹುಟ್ಟಿಸುತ್ತಿದೆ. ಹೀಗಾಗಿ ಯಾವ ಕ್ಷೇತ್ರದಿಂದ ನಿಲ್ಲಬೇಕೆಂಬ ಗೊಂದಲದಲ್ಲಿದ್ದಾರೆ. ಇದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸಹ ಹೊರತಾಗಿಲ್ಲ. ಅವರು ಸೋಲಿನ ಭಯದಿಂದಲೇ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಇವರಿಗೆ ಗೆಲ್ಲುತ್ತೇನೆಂಬ ವಿಶ್ವಾಸವಿದ್ದರೆ ಒಂದೇ ಕ್ಷೇತ್ರದಿಂದ ಸ್ಪರ್ಧಿಸಲಿ. ಒಬ್ಬ ಅಭ್ಯರ್ಥಿ ಎರಡೆರಡು ಕ್ಷೇತ್ರಗಳಿಂದ ಸ್ಪರ್ಧಿಸುವುದು ಸರಿಯಲ್ಲ. ಎಚ್.ಡಿ. ಕುಮಾರಸ್ವಾಮಿ ಸಿಎಂ ಆಗುವ ಭ್ರಮೆಯಲ್ಲಿದ್ದಾರೆ. ಜೆಡಿಎಸ್ನ ಪರಿಸ್ಥಿತಿ ಹೇಗಿದೆ ಎಂಬುದು ಅವರಿಗೆ ಗೊತ್ತಿದೆ ಎಂದರು. Advertisement
ಸಿಎಂ-ಎಚ್ಡಿಕೆಗೆ ಸೋಲಿನ ಭೀತಿ
07:00 AM Apr 07, 2018 | |
Advertisement
Udayavani is now on Telegram. Click here to join our channel and stay updated with the latest news.