Advertisement
ಏಳು ಹೊಸ ರಕ್ಷಣಾ ಕಂಪನಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು ಈ ಹೇಳಿಕೆ ನೀಡಿದ್ದಾರೆ.
Related Articles
Advertisement
“ಇಂದು ನಮ್ಮ ದೇಶವು ತನ್ನ ಸಂಪೂರ್ಣ ಶಕ್ತಿ ಮತ್ತು ಸಾಮರ್ಥ್ಯದೊಂದಿಗೆ ವಿಶ್ವದ ರಕ್ಷಣಾ ಉತ್ಪಾದನಾ ಕೇಂದ್ರವಾಗಿ ಹೊರ ಹೊಮ್ಮಲಿದೆ” ಎಂದು ರಕ್ಷಣಾ ಸಚಿವರು ತಿಳಿಸಿದರು. 2014ರಿಂದಲೂ, ಸ್ಥಳೀಯ ಉತ್ಪನ್ನಗಳಿಗೆ ಬೇಡಿಕೆಯನ್ನು ಉತ್ತೇಜಿಸಲು ರಫ್ತು ಮತ್ತು ವಿದೇಶಿ ನೇರ ಹೂಡಿಕೆಗೆ ಅನುಕೂಲಕರ ವ್ಯವಸ್ಥೆಯನ್ನು ಸೃಷ್ಟಿಸಲು ಕೇಂದ್ರ ಸರಕಾರವು ರಕ್ಷಣಾ ಕ್ಷೇತ್ರದಲ್ಲಿ ಹಲವಾರು ಸುಧಾರಣೆಗಳನ್ನು ತಂದಿದೆ ಎಂದು ತಿಳಿಸಿದರು.
ಒರ್ಡ್ ನೆನ್ಸ್ ಫ್ಯಾಕ್ಟರಿ ಬೋರ್ಡ್ ನ ಪುನರ್ ರಚನೆ ಮಾಡಿ ಏಳು ಕಾರ್ಪೊರೇಟ್ ಸಂಸ್ಥೆಗಳಾಗಿ ಪರಿವರ್ತಿಸುವುದರಿಂದ ಆ ಕಂಪನಿಗಳಿಗೆ ಸ್ವಾಯತ್ತತೆ ನೀಡುವುದರ ಜೊತೆಗೆ, ಹೊಸ ಕಂಪನಿಗಳ ಅಡಿಯಲ್ಲಿ 41 ಕಾರ್ಖಾನೆಗಳ ಕಾರ್ಯನಿರ್ವಹಣೆಯಲ್ಲಿ ಜವಾಬ್ದಾರಿ ಮತ್ತು ದಕ್ಷತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.
ಶಸ್ತ್ರಾಸ್ತ್ರ ಕಾರ್ಖಾನೆಗಳ ವಾಣಿಜ್ಯೀಕರಣದ ಭಾಗವಾಗಿ, ಕೇಂದ್ರ ಸರಕಾರವು ಏಳು ಹೊಸ ಕಂಪನಿಗಳನ್ನು ಆರಂಭಿಸಿತ್ತು. ಸರಕಾರವು ಒರ್ಡ್ ನೆನ್ಸ್ ಫ್ಯಾಕ್ಟರಿ ಬೋರ್ಡನ್ನು ಕಾರ್ಪೊರೇಟ್ ಸಂಸ್ಥೆಗಳನ್ನಾಗಿ ಪರಿವರ್ತಿಸುತ್ತಿದೆ. ಈ ಏಳು ಹೊಸ ರಕ್ಷಣಾ ಕಂಪನಿಗಳು ವಾಯುಸೇನೆ, ಭೂ ಸೇನೆ,ನೌಕಾ ಪಡೆಗಳು ಮತ್ತು ಅರೆಸೇನಾ ಪಡೆಗಳಿಂದ 65,000 ಕೋಟಿ ಮೌಲ್ಯದ 66 ಸಾಂಸ್ಥಿಕ ಒಪ್ಪಂದಗಳನ್ನು ಮಾಡಿಕೊಂಡಿವೆ.
ಅಡ್ವಾನ್ಸ್ಡ್ ವೆಪನ್ಸ್ ಅಂಡ್ ಇಕ್ವಿಪ್ಮೆಂಟ್ ಇಂಡಿಯಾ ಲಿಮಿಟೆಡ್, ಟ್ರೂಪ್ ಕಂಫರ್ಟ್ಸ್ ಲಿಮಿಟೆಡ್, ಅವನಿ ಆರ್ಮರ್ಡ್ ವೆಹಿಕಲ್ಸ್, ಮುನಿಷನ್ಸ್ ಇಂಡಿಯಾ ಲಿಮಿಟೆಡ್, ಇಂಡಿಯಾ ಆಪ್ಟೆಲ್ ಲಿಮಿಟೆಡ್, ಗ್ಲೈಡರ್ಸ್ ಇಂಡಿಯಾ ಲಿಮಿಟೆಡ್, ಯಂತ್ರ ಇಂಡಿಯಾ ಲಿಮಿಟೆಡ್ ಇವು ಉದ್ಘಾಟಣೆಗೊಂಡ ಏಳು ಹೊಸ ಕಂಪನಿಗಳಾಗಿವೆ.