Advertisement

ಕೈ ಶಾಸಕರ ರಕ್ಷಣೆ ಅನಿವಾರ್ಯವಾಗಿತ್ತು

06:20 AM Jul 31, 2017 | |

ಬೆಂಗಳೂರು: ಗುಜರಾತ್‌ನ ಕಾಂಗ್ರೆಸ್‌ ಶಾಸಕರನ್ನು ತಮ್ಮತ್ತ ಸೆಳೆದುಕೊಳ್ಳಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ತಲಾ 10 ಕೋಟಿ ರೂ. ಆಮಿಷ ಒಡ್ಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್‌ ಆರೋಪಿಸಿದರು.

Advertisement

ನಗರದ ಅರಮನೆ ಮೈದಾನದಲ್ಲಿ ಕರ್ನಾಟಕ ನಾಡರ್‌ ಸಂಘದಿಂದ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗುಜರಾತ್‌ನಲ್ಲಿ ಕಾಂಗ್ರೆಸ್‌ ಶಾಸಕರನ್ನು ರಕ್ಷಿಸಿಕೊಳ್ಳುವುದು ಅನಿವಾರ್ಯವಾಗಿದ್ದರಿಂದ ಕರ್ನಾಟಕಕ್ಕೆ ಕರೆ ತಂದಿದ್ದೇವೆ. 40 ಶಾಸಕರು ಈಗಾಗಲೇ ಬಂದಿದ್ದು, ಕಾರಣಾಂತರಗಳಿಂದ ಮೂವರು ಶಾಸಕರು ಬಂದಿಲ್ಲ. ಕಾಂಗ್ರೆಸ್‌ ಶಾಸಕರನ್ನು ಬಿಜೆಪಿಯತ್ತ ಸೆಳೆದುಕೊಳ್ಳಲು ಅಮಿತ್‌ ಶಾ ತಲಾ 10 ಕೋಟಿ ರೂ. ಆಫ‌ರ್‌ ಮಾಡಿದ್ದಾರೆ.

ಹೀಗಾಗಿ, ಕಾಂಗ್ರೆಸ್‌ ಶಾಸಕರನ್ನು ರಕ್ಷಿಸುವುದು ಅನಿವಾರ್ಯವಾಗಿದೆ ಎಂದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಗುಜರಾತ್‌ನ ಪ್ರಭಾವಿ ಮುಖಂಡ ಅಹ್ಮದ್‌ ಪಟೇಲ್‌ ಅವರನ್ನು ರಾಜ್ಯಸಭಾ ಚುನಾವಣೆಯಲ್ಲಿ ಸೋಲಿಸಲೇ ಬೇಕು ಎಂಬುದೇ ಅಮಿತ್‌ ಶಾ ಅವರ ಸಿಂಗಲ್‌ ಅಜೆಂಡವಾಗಿದೆ. ಈ ಹಿನ್ನೆಲೆಯಲ್ಲಿ ಗುಜರಾತ್‌ನ ಕಾಂಗ್ರೆಸ್‌ ಶಾಸಕರಿಗೆ ಹಲವು ರೀತಿಯ ಆಮಿಷ ಒಡ್ಡಿ, ಖರೀದಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಯೊಬ್ಬ ಶಾಸಕರಿಗೂ ತಲಾ 10 ಕೋಟಿ ರೂ.ನೀಡುವುದಾಗಿ ಆಸೆ ತೋರಿಸಿದ್ದಾರೆ ಎಂದು ದೂರಿದರು.

ಬಿಜೆಪಿ ನಾಯಕರು ವಿನಾಃ ಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್‌ನ ಎಲ್ಲಾ ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಗುಜರಾತ್‌ನಿಂದ ರಾಜ್ಯಸಭೆಗೆ ಸ್ಪರ್ಧಿಸಿರುವ ಕಾಂಗ್ರೆಸ್‌ ಅಭ್ಯರ್ಥಿ ಅಹ್ಮದ್‌ ಪಟೇಲ್‌ ಖಚಿತವಾಗಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

Advertisement

Udayavani is now on Telegram. Click here to join our channel and stay updated with the latest news.

Next