Advertisement

ಔದ್ಯಮಿಕ ನ್ಯಾಯಾಧಿಕರಣ ತೀರ್ಪು ಜಾರಿಗೆ ಆಗ್ರಹ

11:58 AM Oct 17, 2017 | Team Udayavani |

ಬೆಂಗಳೂರು: ಕೆಎಸ್‌ಆರ್‌ಟಿಸಿ ನೌಕರರ ವೇತನ ಹೆಚ್ಚಳ ಮತ್ತು ಇತರ ಬೇಡಿಕೆಗಳ ಸಂಬಂಧ ಔದ್ಯಮಿಕ ನ್ಯಾಯಾಧಿಕರಣ ನೀಡಿರುವ ತೀರ್ಪನ್ನು ಸರ್ಕಾರ ಕೂಡಲೇ ಜಾರಿಗೊಳಿಸಬೇಕು ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್ ಆಂಡ್‌ ವರ್ಕರ್ಸ್‌ ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿ ಎಚ್‌.ವಿ.ಅನಂತ ಸುಬ್ಬರಾವ್‌ ಆಗ್ರಹಿಸಿದ್ದಾರೆ.

Advertisement

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಿರುವ ತುಟ್ಟಿ ಭತ್ಯೆ ಹೆಚ್ಚಳ ಮಾಡುವುದು, ಹಬ್ಬದ ಮುಂಗಡವಾಗಿ ವರ್ಷಕ್ಕೆ 5 ಸಾವಿರ ರೂ. ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಸಂಬಂಧ 2005ರಲ್ಲಿ ಸರ್ಕಾರದ ಮುಂದೆ ಪ್ರಸ್ತಾವ ಇಡಲಾಗಿತ್ತು.

ಆದರೆ ಸರ್ಕಾರದೊಂದಿಗಿನ ಮಾತುಕತೆ ವಿಫ‌ಲವಾಗಿತ್ತು. ಹೀಗಾಗಿ ಈ ಪ್ರಕರಣ ಔದ್ಯಮಿಕ ನ್ಯಾಯಾಧಿಕರಣದ ಮೆಟ್ಟಿಲೇರಿತ್ತು. ನ್ಯಾಯಾಲದ ತೀರ್ಪು ಇದೀಗ ಕೆಎಸ್‌ಆರ್‌ಟಿಸಿ ನೌಕರರ ಪರ ಬಂದಿದ್ದು, ಸರ್ಕಾರ ಕೂಡಲೇ ನ್ಯಾಯಾಧಿಕರಣದ ತೀರ್ಪನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಕೆಎಸ್‌ಆರ್‌ಟಿಸಿ ಸಂಸ್ಥೆಯಲ್ಲಿ 1997ರಿಂದ ನಡೆಯುತ್ತಿರುವ ಕಾರ್ಮಿಕ ವಿರೋಧಿ ನೀತಿಗಳ ಬಗ್ಗೆ ಹಾಗೂ ಅದರಿಂದ ಆಗುತ್ತಿರುವ ಲಾಭ ನಷ್ಟಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳ ಬೇಕು ಎಂದು ಆಗ್ರಹಿಸಿದ ಅವರು ಸರ್ಕಾರ ಪದೇ ಪದೇ ಕಾರ್ಮಿಕ ವಿರೋಧಿ ನಿಲುವನ್ನು ತಾಳುತ್ತಿದ್ದು ಇದು ಹೀಗೆ ಮುಂದುವರಿದರೆ ಹೋರಾಟ ಅನಿವಾರ್ಯ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next