Advertisement

ಕಾಶ್ಮೀರಿ ಪಂಡಿತರ ಪುನರ್ವಸತಿಗೆ ಆಗ್ರಹ

11:32 AM Jan 20, 2018 | Team Udayavani |

ಬೆಂಗಳೂರು: ಕಾಶ್ಮೀರಿ ಪಂಡಿತರಿಗೆೆ ಪುನರ್ವಸತಿ ಕಲ್ಪಿಸುವಂತೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಮಾತನಾಡಿತ್ತು.

Advertisement

ಆದರೆ ಈಗ ಮೌನವಾಗಿದೆ. ಕೂಡಲೇ ಕಾಶ್ಮೀರಿ ಹಿಂದುಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕಾಶ್ಮೀರದಲ್ಲಿ ಭಯೋತ್ಪಾದಕರು ದೇವಾಲಯಗಳನ್ನು ನಾಶ ಪಡಿಸಿದ್ದು ಇವುಗಳ ಪುನರ್‌ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕು.  ಕಾಶ್ಮೀರದಲ್ಲಿ ನೆಲೆಸಿರುವ ಹಿಂದೂಗಳಿಗೆ ಶೈಕ್ಷಣಿಕ ಮತ್ತು ಆರ್ಥಿಕ ಸಹಾಯವನ್ನು ನೀಡಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next