ಆರೋಪಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಪಿಎಸ್‌ಐ ಖಾಜಾ ಹುಸೇನ್ ಲಾಠಿ ಪ್ರಹಾರ ಮಾಡಿರುವುದು ಖಂಡನೀಯವಾಗಿದ್ದು, ಕೂಡಲೇ ಅವರನ್ನು ಅಮಾನತ್ತು ಮಾಡಬೇಕೆಂದು ಜಿಲ್ಲಾ ಬಿಜೆಪಿ ಆಗ್ರಹಿಸಿದೆ.
ಪಕ್ಷದ ಜಿಲ್ಲಾಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ ಮತ್ತು ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ನೇತೃತ್ವದಲ್ಲಿ ಪ್ರಮುಖರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು. ಪ್ರತಿಭಟನೆ ಆಯೋಜನೆ ಮತ್ತು ಮುಖ್ಯಮಂತ್ರಿಗಳ ಪ್ರತಿಕೃತಿ ದಹನ ಮಾಡುವ ಕುರಿತು ಮಾರ್ಕೇಟ್ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು. ಕಾನೂನಿನಲ್ಲಿ ಅವಕಾಶವಿದ್ದರೂ ಪ್ರತಿಕೃತಿ ದಹನಕ್ಕೆ ವಿರೋಧ ವ್ಯಕ್ತಪಡಿಸಲಾಗಿತ್ತು. ರವಿವಾರ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದ ಕಾರ್ಯಕರ್ತರ ಮೇಲೆ ಪಿಎಸ್‌ಐ ಖಾಜಾ ಹುಸೇನ್
ಅವರು ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ತಾಲೂಕು ಪ್ರಧಾನ
ಕಾರ್ಯದರ್ಶಿ ಅರವಿಂದ ನೀಲಕಂಠರಾವ್ ಅವರ ಎಡಗೈ ಮುರಿದಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ. ಉರಿಯುತ್ತಿರುವ ಬೆಂಕಿಯ ಪ್ರತಿಕೃತಿಯನ್ನು ಅರವಿಂದರ ಮೇಲೆ ಎಸೆದು ಅಮಾನುಷವಾಗಿ ವರ್ತಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತನೆ ಮಾಡಿದ್ದು ಸಾಮಾನ್ಯ ಜನರು ಬೆಚ್ಚಿಬೀಳುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ದೂರಲಾಗಿದೆ. ಕಾನೂನು ಮೀರಿ ವರ್ತನೆ ಮಾಡಿರುವ ಪಿಎಸ್‌ಐ ಹುಸೇನ್ ಅವರನ್ನು ಕೂಡಲೇ ಅಮಾನತು ಮಾಡಬೇಕು. ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
Advertisement