Advertisement
ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ವಿಹಿಂಪ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್, ಮಂಗಳೂರಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರ ಮನೆ ಮೇಲೆ ಮಧ್ಯರಾತ್ರಿ ದಾಳಿ ನಡೆಯುತ್ತಿದೆ. ಅಲ್ಲದೇ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ಹಾಕಿ ಬಂಧಿಸುವ ಪ್ರಯತ್ನಗಳೂ ನಡೆಯುತ್ತಿವೆ. ಹಿಂದೂಗಳ ಮೇಲೆ ಪದೇ ಪದೇ ಈ ರೀತಿಯ ದೌರ್ಜನ್ಯ ನಡೆಯುತ್ತಿದ್ದರೆ ರಾಜ್ಯಾದ್ಯಂತ ಹೋರಾಟ ಅನಿವಾರ್ಯವಾದೀತು ಎಂದರು.
ಅಮರನಾಥ ಯಾತ್ರಿಕರ ಮೇಲೆ ಉಗ್ರರ ದಾಳಿ ಖಂಡನೀಯ. ಅಮರನಾಥ ಯಾತ್ರೆ ನಿರ್ವಹಣೆ ಯನ್ನು ಸೇನೆಯ ಸುಪರ್ದಿಗೆ ಒಪ್ಪಿಸಬೇಕು. ಉಗ್ರರನ್ನು ಹಾಗೂ ಅವರನ್ನು ಸಮರ್ಥಿಸುವವರನ್ನು ನಿರ್ನಾಮಗೊಳಿಸಬೇಕು ಎಂದರು.
ವಿಹಿಂಪ ಜಿಲ್ಲಾ ಕಾರ್ಯದರ್ಶಿ ಗೋಪಾಲ್, ಭುಜಂಗ ಕುಲಾಲ್, ಶಿವಾನಂದ ಮೆಂಡನ್, ನಾಗೇಶ್ ಉಪಸ್ಥಿತರಿದ್ದರು.