Advertisement

ಪ್ರಜಾಪ್ರಭುತ್ವ ವ್ಯವಸ್ಥೆ ಅರ್ಥ ಕಳೆದುಕೊಳ್ಳುತ್ತಿದೆ: ಸಂತೋಷ್‌ ಹೆಗ್ಡೆ

10:32 AM Dec 11, 2019 | sudhir |

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅರ್ಥ ಕಳೆದುಕೊಳ್ಳುತ್ತಿದೆ ಎಂದು ನಿವೃತ್ತ ಲೋಕಾಯುಕ್ತ ಸಂತೋಷ್‌ ಹೆಗ್ಡೆ ಅವರು ಅಭಿಪ್ರಾಯ ಪಟ್ಟರು.

Advertisement

ಕರ್ನಾಟಕ ಮಾನವನ ಹಕ್ಕುಗಳ ಜನಜಾಗೃತಿ ವೇದಿಕೆ ಮಂಗಳವಾರ ಹಮ್ಮಿಕೊಂಡಿದ್ದ ಮಾನವ ಹಕ್ಕು ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಜನಪ್ರತಿನಿಧಿಗಳು ಜನರಿಂದ ಚಂದಾ ಎತ್ತಿ ಚುನಾವಣೆಗೆ ನಿಲ್ಲುತ್ತಿದ್ದರು. ಆದರೆ ಆ ವ್ಯವಸ್ಥೆ ಸಂಪೂರ್ಣ ಬುಡಮೇಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ಜನಪ್ರತಿನಿಧಿಗಳು ಜನಸೇವಕರಾಗಿ ಉಳಿದಿಲ್ಲ. ಅವರೆಲ್ಲರೂ ಈಗ ಮಾಲೀಕರಾಗಿ ಹೋಗಿದ್ದಾರೆ. ಇಂತಹ ವ್ಯಕ್ತಿಗಳಿಂದ ಮೌಲ್ಯಯುತ ರಾಜಕಾರಣ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯ ನಿಜವಾದ ಅರ್ಥ ಜನರಿಂದ ಸಿಗಬೇಕಾಗಿದೆ. ಆ ನಿಟ್ಟಿನಲ್ಲಿ ಜನರ ಆಲೋಚನೆಗಳೂ ಕೂಡ ಇರಬೇಕಾಗಿದೆ ಎಂದು ತಿಳಿಸಿದರು.
ರಾಜಕೀಯ ಮೌಲ್ಯಗಳು ಕುಸಿಯುತ್ತಿರುವ ಈ ಸಂದರ್ಭದಲ್ಲಿ ಮಾನವೀಯ ಮೌಲ್ಯಗಳು ಕೂಡ ಕಡಿಮೆ ಆಗುತ್ತಿವೆ. ನನ್ನ ಐದು ವರ್ಷಗಳ ಲೋಕಾಯುಕ್ತ ಸೇವೆಯಲ್ಲಿ ಹಲವು ರೀತಿಯ ಅನುಭವವಾಗಿದೆ. ಬಹಳಷ್ಟು ರೀತಿಯ ಅನ್ಯಾಯ ನಡೆದಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next