ವಿಶೇಷ ವರದಿ
ಹಾವೇರಿ: ಕೊರೊನಾ ಹಿನ್ನೆಲೆ ಇದೇ ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬಹು ಆಯ್ಕೆ ಪ್ರಶ್ನೆಗಳ ಪ್ರಶ್ನೆಪತ್ರಿಕೆ ನೀಡಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಈಗಾಗಲೇ ವಿದ್ಯಾರ್ಥಿಗಳಿಗೆ ಒಎಂಆರ್ ಶೀಟ್ ತುಂಬುವ ತರಬೇತಿ ಸಹ ನೀಡಲಾಗಿದ್ದು, ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಕೈಗೊಳ್ಳುತ್ತಿದೆ.
ಕೊರೊನಾ ಹಿನ್ನೆಲೆಯಲ್ಲಿ ಜು.18 ಮತ್ತು 22 ರಂದು ಪರೀಕ್ಷೆ ನಡೆಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕÒಣ ಇಲಾಖೆ ಅಗತ್ಯ ಸಿದ್ಧತೆ ಕೈಗೊಂಡಿದೆ. ವಿದ್ಯಾರ್ಥಿಗಳ ಸುರಕ್ಷತೆಗೆ ಗಮನ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಈಗಲೇ ಮುಂಜಾಗ್ರತಾ ಕ್ರಮ ಅನುಸರಿಸಿ ಪರೀಕ್ಷೆ ನಡೆಸಲು ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಜಿಲ್ಲೆಯಲ್ಲಿ 405 ಪ್ರೌಢಶಾಲೆಗಳಿದ್ದು, 21,848 ಹೊಸ ವಿದ್ಯಾರ್ಥಿಗಳು, ಖಾಸಗಿ ಹಾಗೂ ಪುನರಾವರ್ತಿತ 2,241 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ಎರಡು ದಿನಕ್ಕೆ ಸೀಮಿತಗೊಳಿಸಿದ್ದು, ಪರೀಕ್ಷಾ ವಿಧಾನದಲ್ಲೂ ಬದಲಾವಣೆ ಮಾಡಲಾಗಿದೆ.
ಜು.19ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ತಲಾ 40 ಅಂಕಗಳಂತೆ 120 ಅಂಕಗಳಿಗೆ ಮೊದಲ ಪರೀಕ್ಷೆ ನಡೆಯಲಿದೆ. ಜು.22ರಂದು ಭಾಷಾ ವಿಷಯಗಳಾದ ಕನ್ನಡ, ಇಂಗ್ಲಿಷ್, ಉರ್ದು ಪರೀಕ್ಷೆ ನಡೆಯಲಿದೆ. ಒಎಂಆರ್ ಶೀಟ್ ಬಗ್ಗೆ ಮಾಹಿತಿ: ಈ ಬಾರಿ ವಿವರಣಾತ್ಮಕ ಉತ್ತರದ ಬದಲಾಗಿ ಬಹು ಆಯ್ಕೆ ಮಾದರಿ ಪ್ರಶ್ನೆ ಪತ್ರಿಕೆ ಇರಲಿದೆ. ಉತ್ತರವನ್ನು ಒಎಂಆರ್ ಶೀಟ್‌ನಲ್ಲಿ ತುಂಬಬೇಕಿದೆ. ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಈ ವಿಧಾನದಲ್ಲಿ ಉತ್ತರ ಬರಯಬೇಕಿರುವುದರಿಂದ ಅಗತ್ಯ ತರಬೇತಿ ನೀಡಲು ಇಲಾಖೆ ಮುಂದಾಗಿದೆ. ಅದಕ್ಕಾಗಿ ಒಎಂಆರ್ ಶೀಟ್ ಯಾವ ರೀತಿ ಭರ್ತಿ ಮಾಡಬೇಕು ಎಂಬ ಮಾಹಿತಿ ವಿದ್ಯಾರ್ಥಿಗಳಿಗೆ ತಿಳಿಸುವ ನಿಟ್ಟಿನಲ್ಲಿ ಈಗಾಗಲೇ ಎಲ್ಲ ಪ್ರೌಢಶಾಲೆ ಮುಖ್ಯಾಧ್ಯಾಪಕರಿಗೆ ಒಎಂಆರ್ ಶೀಟ್ ಕಳುಹಿಸಿ ಅವುಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಭರ್ತಿ ಮಾಡುವ ತರಬೇತಿ ನೀಡಲಾಗಿದೆ.
ಕಳೆದ ವರ್ಷದಿಂದ ಫಲಿತಾಂಶದ ಆಧಾರದಲ್ಲಿ ಗ್ರೇಡ್ ಪದ್ಧತಿ ಜಾರಿಗೊಳಿಸಲಾಗಿದೆ. ಕಳೆದ ವರ್ಷ ಜಿಲ್ಲೆಗೆ “ಸಿ’ ಗ್ರೇಡ್ ಬಂದಿತ್ತು. ಈ ಬಾರಿ ಬಹು ಆಯ್ಕೆ ಮಾದರಿ ಪ್ರಶ್ನೆ ಪತ್ರಿಕೆ ಇರುವುದರಿಂದ ಫಲಿತಾಂಶ ಸುಧಾರಣೆಗೆ ಹೆಚ್ಚಿನ ಅವಕಾಶವಿದೆ. ಆದ್ದರಿಂದ ಪರೀûಾ ಫಾರಂ ತುಂಬಿರುವ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ಮಾಡಲು ಕ್ರಮ ವಹಿಸಲಾಗಿದೆ. ಆ ಮೂಲಕ “ಎ’ ಗ್ರೇಡ್ ಸಾಧನೆ ಮಾಡುವ ಗುರಿಯೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅ ಧಿಕಾರಿಗಳು ಅಗತ್ಯ ಸಿದ್ಧತೆ ನಡೆಸಿದ್ದಾರೆ. ಜಿಲ್ಲೆಯಲ್ಲಿ 155 ಪರೀûಾ ಕೇಂದ್ರ: ಕೊರೊನಾ ಸೋಂಕು ಇಳಿಮುಖವಾಗಿದ್ದರೂ ವಿದ್ಯಾರ್ಥಿಗಳ ಸುರಕÒತೆಗೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿರುವ ಅಧಿ ಕಾರಿಗಳು, ಹೆಚ್ಚುವರಿ ಪರೀಕ್ಷಾ ಕೇಂದ್ರ ಗುರುತಿಸಿದ್ದಾರೆ. ಜಿಲ್ಲೆಯಲ್ಲಿ 155 ಪರೀಕ್ಷಾ ಕೇಂದ್ರ ಮಾಡಲು ಮಾಡಲಾಗುತ್ತಿದೆ.
ಹಾವೇರಿ ತಾಲೂಕಿನಲ್ಲಿ 29, ಬ್ಯಾಡಗಿ-14, ಹಾನಗಲ್ಲ-29, ಹಿರೇಕೆರೂರು-18, ರಾಣಿಬೆನ್ನೂರು-28, ಶಿಗ್ಗಾವಿ-20, ಸವಣೂರು-17 ಪರೀûಾ ಕೇಂದ್ರ ತೆರೆಯಲಾಗುತ್ತಿದೆ. ಒಂದು ಕೊಠಡಿಯಲ್ಲಿ ಗರಿಷ್ಠ 12 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗುತ್ತಿದೆ. ಒಂದು ಡೆಸ್ಕ್ನಲ್ಲಿ ಒಬ್ಬರು ಮಾತ್ರ ಪರೀಕ್ಷೆ ಬರೆಯಲಿದ್ದಾರೆ. ಅಗತ್ಯ ಮುಂಜಾಗ್ರತಾ ಕ್ರಮ: ಪರೀಕ್ಷೆ ನಡೆಯುವ ದಿನಾಂಕಕ್ಕಿಂತ ಮುಂಚಿತವಾಗಿ ಆಯಾ ಗ್ರಾಪಂ, ಸ್ಥಳೀಯ ಸಂಸ್ಥೆಗಳಿಂದ ಸ್ಯಾನಿಟೈಸ್ ಮಾಡಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದು, ಕಡ್ಡಾಯ ಮಾಸ್ಕ್ ಬಳಕೆ, ಥರ್ಮಲ್ ಸ್ಕ್ರೀನಿಂಗ್ ಮಾಡಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲು ಉದ್ದೇಶಿಸಲಾಗಿದೆ. ಸೋಂಕಿನ ಲಕ್ಷಣ ಇದ್ದರೂ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ಹೆಚ್ಚುವರಿ ಕೊಠಡಿ ಮೀಸಲಿರಿಸಲಾಗಿದೆ. ಪಾಸಿಟಿವ್ ಇದ್ದವರಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದ್ದು, ಪ್ರತಿ ತಾಲೂಕಿನಲ್ಲಿ ಒಂದೊಂದು ಕೋವಿಡ್ ಸೆಂಟರ್ ಕಾಯ್ದಿರಿಸಲಾಗಿದೆ ಎಂದು ಡಿಡಿಪಿಐ ಅಂದಾನಪ್ಪ ವಡಗೇರಿ ಮಾಹಿತಿ ನೀಡಿದ್ದಾರೆ.