Advertisement
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜರಗಿದ ಪ್ರಾದೇಶಿಕ ಸಾರಿಗೆ ಇಲಾಖೆಯ ಸಭೆಯಲ್ಲಿ ಸಾರ್ವಜನಿಕರು ಅಹವಾಲುಗಳನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು.
ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಖಾಸಗಿ ಬಸ್‌ನವರನ್ನು ಸರಕಾರ ಎದುರಿಸುವ ಪರಿಸ್ಥಿತಿ ಬಂದೊದಗಿದೆ. ಗ್ರಾಮೀಣ ಅಭಿವೃದ್ಧಿಯ ನೆಲೆಯಲ್ಲಿ ಕೂಡಲೇ ಬಸ್ ಪುನರಾರಂಭಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರಪ್ರತಿಭಟನೆ ನಡೆಸಲಾಗುವುದು ಎಂದರು. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಪ್ರತಿಕ್ರಿಯಿಸಿ, ಈ ವಿಚಾರ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿದ್ದು, ತಡೆಯಾಜ್ಞೆ ಇದೆ. ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
Related Articles
Advertisement
ಮೊಂಟೆಪದವು-ನಾಟೆಕಲ್ಲು-ಮುಡಿಪು ಮಾರ್ಗವಾಗಿ ಬಜಾಲ್-ಕಲ್ಲಿಕಟ್ಟೆ ಮಾರ್ಗವಾಗಿ ಕೇವಲ ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದು, ವಿದ್ಯಾರ್ಥಿಗಳಿಗೆ ನಿಲುಗಡೆ ಮಾಡುವುದಿಲ್ಲ. ಆದ್ದರಿಂದ ಕೂಡಲೇ ಕೆಎಸ್‌ಆರ್‌ಟಿಸಿ ಬಸ್ ಸಂಪರ್ಕಒದಗಿಸಬೇಕು ಎಂದು ಗ್ರಾಮಸ್ಥರು ತಿಳಿಸಿದರು. ಮಾಣಿಲ-ಧರ್ಮಸ್ಥಳ- ಕುಕ್ಕೆ ಸುಬ್ರಹ್ಮಣ್ಯ ಮಾರ್ಗವಾಗಿ ಬಸ್ ಸಂಪರ್ಕ ನೀಡಬೇಕು. ಈ ಮಾರ್ಗದಲ್ಲಿ ಹೆಚ್ಚಾಗಿ ಬಸ್ ಪಾಸ್ ಹೊಂದಿದ ಮಕ್ಕಳಿದ್ದು, ಇದರಿಂದಾಗಿ ಸರಕಾರಿ ಬಸ್‌ಗಳನ್ನು ಹೆಚ್ಚಾಗಿ ನಿಯೋಜನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಅಪರ ಜಿಲ್ಲಾಧಿಕಾರಿ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ನಂದೀಶ್ ಕುಮಾರ್ ರೆಡ್ಡಿ, ಆರ್‌ಟಿಒ ಕಾರ್ಯದರ್ಶಿ ಜಿಎಸ್ ಹೆಗಡೆ, ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಕ ದೀಪಕ್ ಕುಮಾರ್ ಸಹಿತ ಕೆಎಸ್‌ಆರ್
ಟಿಸಿ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.