Advertisement

ಸಿಂಧ್‌ನಲ್ಲಿ ದೇಗುಲ ಧ್ವಂಸ

12:30 AM Feb 07, 2019 | |

ಇಸ್ಲಮಾಬಾದ್‌/ಕರಾಚಿ: ಪಾಕಿಸ್ಥಾನದ ಸಿಂಧ್‌ ಪ್ರಾಂತ್ಯದಲ್ಲಿ ದೇಗುಲವನ್ನು ಧ್ವಂಸಗೊಳಿಸಲಾಗಿದೆ. ಮಾತ್ರವಲ್ಲದೆ ಪವಿತ್ರ ಗ್ರಂಥಗಳನ್ನು ಹಾಗೂ ವಿಗ್ರಹಗಳನ್ನು ಕಿಡಿಗೇಡಿಗಳು ಬೆಂಕಿಗೆ ಹಾಕಿ ಸುಟ್ಟಿದ್ದಾರೆ. ಪ್ರಧಾನಮಂತ್ರಿ ಇಮ್ರಾನ್‌ ಖಾನ್‌ ಘಟನೆಯನ್ನು ಖಂಡಿಸಿದ್ದು, ತನಿಖೆಗೆ ಆದೇಶ ನೀಡಿದ್ದಾರೆ. ಸಿಂಧ್‌ ಪ್ರಾಂತ್ಯದ ಖೈರ್‌ಪುರ್‌ ಜಿಲ್ಲೆಯ ಕುಂಬ್‌ ಎಂಬಲ್ಲಿ ಅಪರಿಚಿತ ಕಿಡಿಗೇಡಿಗಳು ಈ ದುಷ್ಕೃತ್ಯವೆಸಗಿದ್ದಾರೆ. ಇದೊಂದು ಖಂಡನಾರ್ಹ ಎಂದು ಟ್ವೀಟ್‌ ಮಾಡಿರುವ ಪ್ರಧಾನಿ ಇಮ್ರಾನ್‌ ಖಾನ್‌ ಸಿಂಧ್‌ ಪ್ರಾಂತ್ಯದ ಅಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರನ್ನು ಕಾನೂನಿನ ಕ್ರಮಕ್ಕೆ ಒಳಪಡಿಸಬೇಕು. ಈ ಘಟನೆ ಕುರಾನ್‌ನ ಬೋಧನೆಗಳಿಗೆ ವಿರುದ್ಧವಾದದ್ದು ಎಂದು ಹೇಳಿದ್ದಾರೆ. ಘಟನೆ ಬಳಿಕ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next