Advertisement

ಸರ್ಕಾರಗಳಿಂದ ಕಾರ್ಮಿಕರ ಹಕ್ಕು ನಾಶ

01:20 PM Sep 15, 2019 | Suhan S |

ಕೆ.ಆರ್‌.ಪೇಟೆ: ಕಾರ್ಮಿಕರ ಹಿತವನ್ನು ಬಲಿಕೊಟ್ಟು ಬಂಡವಾಳಶಾಹಿಗಳ ಪರವಾಗಿ 44ಕ್ಕೂ ಹೆಚ್ಚು ಕಾನೂನು ತಿದ್ದುಪಡಿಗಳನ್ನು ಮಾಡಿರುವ ಕೇಂದ್ರ ಸರ್ಕಾರವು ಕಾರ್ಮಿಕರ ಸಂವಿಧಾನಬದ್ಧವಾದ ಹಕ್ಕುಗಳನ್ನು ನಾಶಮಾಡುತ್ತಿದೆ ಎಂದು ಜಿಲ್ಲಾ ಸಿಐಟಿಯು ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ ಹೇಳಿದರು.

Advertisement

ಅವರು ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದ ಸಿಐಟಿಯು ಜಿಲ್ಲಾ 7ನೇ ಕಾರ್ಮಿಕ ಸಮ್ಮೇಳನದಲ್ಲಿ ಭಾಗವಹಿಸಿ ಪಟ್ಟಣದ ಬಸವನಗುಡಿ ಬಳಿಯಿಂದ ನಡೆದ ಕಾರ್ಮಿಕರ ಜಾಗೃತಿ ಜಾಥಾವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಮಿಕರ ಹಕ್ಕುಗಳನ್ನು ರಕ್ಷಣೆ ಮಾಡಬೇಕು. ಕಾರ್ಮಿಕರಿಗೆ ಕನಿಷ್ಠ 18ಸಾವಿರ ರೂ. ವೇತನವನ್ನು ನೀಡಬೇಕು. ದುಡಿಯುವ ವರ್ಗಗಳ ರಕ್ಷಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು. ಕಾರ್ಮಿಕರು ಸೇರಿದಂತೆ ದುಡಿಯುವ ವರ್ಗಗಳ ಜನರಿಗೆ ಆರೋಗ್ಯ ಮತ್ತು ಆಹಾರ ಭದ್ರತೆಯನ್ನು ನೀಡಬೇಕು. ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಿ, ಪಡಿತರ ಸಾರ್ವತ್ರೀಕರಣವನ್ನು ಕಡ್ಡಾಯವಾಗಿ ಮಾಡಬೇಕು. ಬೆವರು ಹರಿಸಿ ಕಷ್ಠಪಟ್ಟು ದುಡಿದ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ದರವನ್ನು ನಿಗದಿ ಮಾಡಬೇಕು. ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಗ್ರಾಪಂ ನೌಕರರ ಸಂಘ, ಬಿಸಿಯೂಟ ತಯಾರಕರ ಸಂಘ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ದುಡಿಯುವ ವರ್ಗಗಳ ಸಹಕಾರದಲ್ಲಿ ಮಂಡ್ಯ ಜಿಲ್ಲಾ ಮಟ್ಟದ 7ನೇ ಕಾರ್ಮಿಕ ಸಮ್ಮೇಳನವನ್ನು ಸಿಐಟಿಯ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯದ ಹಿರಿಯ ರೈತನಾಯಕ ಮುದುಗೆರೆ ರಾಜೇಗೌಡ ಮಾತನಾಡಿ, ಐಕ್ಯತೆ ಮತ್ತು ಸೌಹಾರ್ದತೆಯ ಪರಂಪರೆಯನ್ನು ಉಳಿಸಲು ಹೋರಾಡುತ್ತಿರುವ, ತಮ್ಮ ಸಂಧಾನ ಬದ್ಧವಾದ ಹಕ್ಕುಗಳನ್ನು ಕೇಳುತ್ತಿರುವ ಕಾರ್ಮಿಕರನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಹೋರಾಡುತ್ತಿರುವ ಸಿಐಟಿಯು ಕಾರ್ಮಿಕ ಸಂಘಟನೆ ಹಾಗೂ ರೈತ ಸಂಘವನ್ನು ನಿಯಂತ್ರಿಸಿ ತನ್ನ ಬೇಳೆ ಬೇಯಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹುನ್ನಾರ ನಡೆಸಿವೆ ಎಂದರು.

ಬಂಡವಾಳಶಾಹಿಗಳ ಹಿತವನ್ನು ಕಾಪಾಡಲು ಕಾನೂನಿಗೆ ತಿದ್ದುಪಡಿಯನ್ನು ತಂದು ಕಾರ್ಮಿಕರ ಹಕ್ಕುಗಳನ್ನು ಮೊಟಕು ಮಾಡುತ್ತಿವೆ. ಈ ಬಗ್ಗೆ ಉಗ್ರವಾದ ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ಕೃಷಿಯನ್ನು ಉದ್ಯಮವೆಂದು ಘೋಷಿಸಿ, ರೈತರ ಕಲ್ಯಾಣಕ್ಕೆ ಮುಂದಾಗಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕಾರ್ಮಿಕರ ಕೆಲಸಕ್ಕೆ ಕನಿಷ್ಠ ಕೂಲಿಯನ್ನು ನಿಗದಿಗೊಳಿಸಿ ಕಾರ್ಮಿಕರ ಹಕ್ಕುಗಳನ್ನು ಸಂರಕ್ಷಣೆ ಮಾಡಬೇಕು. ರೈತರ ಆತ್ಮಹತ್ಯೆ ತಡೆಗೆ ಕಾರ್ಯಕ್ರಮ ರೂಪಿಸಬೇಕು ಎಂದು ರಾಜೇಗೌಡ ಒತ್ತಾಯಿಸಿದರು.

Advertisement

ತಾಲೂಕು ರೈತ ಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್‌, ಗ್ರಾಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಮಕೃಷ್ಣ, ತಾಲೂಕು ಅಧ್ಯಕ್ಷ ಮೋದೂರು ನಾಗರಾಜು, ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಜಿಲ್ಲಾಧ್ಯಕ್ಷೆ ಮಹದೇವಮ್ಮ ಸೇರಿದಂತೆ ಕಾರ್ಮಿಕರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next