Advertisement

ಜಿಲ್ಲೆಯ ಅಭಿವೃದ್ಧಿಯೇ ರೇವಣ್ಣನವರ ಗುರಿ ಹೊರತು  ಸ್ವಾರ್ಥವಿಲ್ಲ

07:40 AM Feb 19, 2019 | Team Udayavani |

ಹಾಸನ: ಎಚ್‌.ಡಿ.ದೇವೇಗೌಡರನ್ನು ರಾಜಕಾರಣದಲ್ಲಿ ಅತಿ ಎತ್ತರಕ್ಕೆ ಬೆಳೆಸಿದ ಹಾಸನ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯಾಗಬೇಕು. ದೇವೇಗೌಡರ ಕನಸು ನನಸಾಗಬೇಕು ಎಂಬುದು ಸಚಿವ ಎಚ್‌.ಡಿ.ರೇವಣ್ಣ ಅವರ ಹೋರಾಟವೇ ಹೊರತು ಅವರಿಗೆ ಯಾವುದೇ ಸ್ವಾರ್ಥವಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮ ಹಿರಿಯ ಸಹೋದರನ ಕಾರ್ಯವೈಖರಿಯನ್ನು ಹಾಡಿ ಹೊಗಳಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರೈತರ ಕೃಷಿ ಸಾಲಮನ್ನಾ ಪ್ರಮಾಣಪತ್ರಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

Advertisement

ಜಿಲ್ಲೆಯ ಜನರ ಋಣ ತೀರಿಸುತ್ತೇವೆ: ಎಚ್‌.ಡಿ.ರೇವಣ್ಣ ಹಾಸನ ಜಿಲ್ಲೆಯ ಅಭಿವೃದ್ಧಿಗಷ್ಟೇ ಸೀಮಿತ ಎಂಬ ಟೀಕೆಗಳು ನಿರಂತರವಾಗಿ ಕೇಳಿ ಬರುತ್ತಿವೆ. ಆದರೆ ಹಾಸನ ಜಿಲ್ಲೆಯ ಜನರು ನಮ್ಮನ್ನು ಮನೆಯ ಮಕ್ಕಳಂತೆ ರಾಜಕಾರಣದಲ್ಲಿ ಬೆಳೆಸಿದ್ದೀರಿ. ಜಿಲ್ಲೆಯ ಜನರ ಅಶೀರ್ವಾದದಿಂದಲೇ ದೇವೇಗೌಡರು ರಾಷ್ಟ್ರಮಟ್ಟದವರೆಗೂ ಬೆಳೆದು ಪ್ರಧಾನಿಯೂ ಆದರು. ಇಷ್ಟು ದೊಡ್ಡ ಕೊಡುಗೆ ನೀಡಿದ ಹಾಸನ ಜಿಲ್ಲೆಯ ಜನರ ಋಣ ತೀರಿಸಬೇಕು ಎಂಬುದು ದೇವೇಗೌಡರ ಮಹದಾಸೆ. ಆ ನಿಟ್ಟಿನಲ್ಲಿ ರೇವಣ್ಣ ಅವರು ಕೆಲಸ ಮಾಡುತ್ತಿದ್ದಾರೆ. ಅದರಲ್ಲಿ ಅವರ ಸ್ವಾರ್ಥವೇನೂ ಇಲ್ಲ ಎಂದರು. 

ಹಾಸನದಿಂದಲೇ ಆರಂಭ: ಸರ್ಕಾರದ ಎಲ್ಲಾ ಕಾರ್ಯಕ್ರಮಗಳು ಹಾಸನದಿಂದಲೇ ಆರಂಭವಾಗಬೇಕು ಎಂಬುದು ರೇವಣ್ಣ ಅವರು ಹೋರಾಡುತ್ತಾರೆ. ಒಮ್ಮೊಮ್ಮೆ ಸಂಘರ್ಷಕ್ಕೂ ನಿಲ್ಲುತ್ತಾರೆ. ಆ ನಿಟ್ಟಿನಲ್ಲಿ ಸಾಲ ಮನ್ನಾದ ಕಾರ್ಯಕ್ರಮವನ್ನು ಈಗ ಹಾಸನದಿಂದಲೇ ಆರಂಭಿಸಿದ್ದಾರೆ. ಇದಕ್ಕಾಗಿ ಸಾವಿರಾರು ಜನರನ್ನು ಸೇರಿಸಲು ಶ್ರಮಿಸಿದ್ದಾರೆ ಎಂದ ಅವರು, ರೇವಣ್ಣ ಅವರು ಹಾಸನ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.

ಆದರೆ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿಲ್ಲ. ರಾಜ್ಯದ ವಿವಿಧ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಚಾಲನೆ ನೀಡುತ್ತಿದ್ದು, ಮಂಗಳವಾರ ಮಂಡ್ಯ ಜಿಲ್ಲೆಯಲ್ಲಿ ಸುಮಾರು 3ಸಾವಿರ ಕೋಟಿ ರೂ. ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದು, ಮೈಸೂರು ಜಿಲ್ಲೆಯಲ್ಲೂ ಕುಡಿಯುವ ನೀರಿನ ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದರು. ಮುಂದಿನ ವಾರದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು, ಸಕಲೇಶಪುರ, ಬೇಲೂರು, ಅರಸೀಕೆರೆ ತಾಲೂಕುಗಳಲ್ಲಿ ಪ್ರವಾಸ ನಡೆಸಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುವುದು ಎಂದೂ ಹೇಳಿದರು. 

ನಾಲೆಗಳ ಆಧುನೀಕರಣ: ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಮಾತನಾಡಿ, ಅರಸೀಕೆರೆ ಮತ್ತು ಚನ್ನರಾಯಪಟ್ಟಣ ತಾಲೂಕಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್‌ ಮತ್ತು ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು. ಮುಂದಿನ ವಾರ ಹೇಮಾವತಿ ಬಲದಂಡೆ ಹಾಗೂ ಬಲ ಮೇಲ್ದಂಡೆ ನಾಲೆಗಳ ಅಧುನೀಕರಣ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದೂ ತಿಳಿಸಿದರು. 

Advertisement

ಚುನಾವಣೆ ಸಂದರ್ಭದಲ್ಲಿ ಉತ್ತರ ನೀಡುವೆವು: ದೇವೇಗೌಡ
ಹಾಸನ:
ಜಿಲ್ಲೆಯಲ್ಲಿ ಸಾವಿರಾರು ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ವಿರೋಧಿಗಳಿಗೆ ತಕ್ಕ ಉತ್ತರ ಕೊಡುವ ಶಕ್ತಿ ನಮಗಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇವೇಗೌಡ ಹೇಳಿದರು. 

ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರೈತರ ಕೃಸಿ ಸಾಲಮನ್ನಾ ಪ್ರಮಾಣಪತ್ರಗಳ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರೈತರ 46 ಸಾವಿರ ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಿದ್ದಾರೆ. ಇದು ನನಗೇ ಅಚ್ಚರಿಯಾಗುತ್ತಿದೆ ಎಂದರು.

ಭರವಸೆ ಈಡೇರಿಕೆ: ಈ ಹಿಂದೆ ಮುಖ್ಯಮಂತಿಯಾಗಿದ್ದ ಸಿದ್ದರಾಮಯ್ಯ ಅವರು ಘೋಷಿಸಿದ್ದ ಸಾಲ ಮನ್ನಾದ 3,400 ಕೋಟಿ ರೂ. ಸಾಲ ಮನ್ನಾದ ಮೊತ್ತ ಪಾವತಿಸಿ, ಹಿಂದಿನ ಸರ್ಕಾರದ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೊಸದಾಗಿ 46 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುವುದು ಸುಲಭದ ಮಾತಲ್ಲ. ಅದರೆ ಎಷ್ಟೇ ಕಷ್ಟವಾದರೂ ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿಯವರು ಒಂದು ವರ್ಷದೊಳಗೇ ಈಡೇರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಾಸನ ಜಿಲ್ಲೆಯ 2.20 ಲಕ್ಷ ರೈತ ಕುಟುಂಬಗಳ 1,600 ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ರೈತರಿಗಾಗಿ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಎಂದು ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯನ್ನು ಶ್ಲಾ ಸಿದರು. 

ದಬ್ಟಾಳಿಕೆ ರಾಜಕಾರಣ ಮಾಡಲ್ಲ: ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ.ಗೌಡ ಅವರ ನಿವಾಸದ ಬಳಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ ಮುಖ್ಯಮಂತ್ರಿಯವರು, ದೇವೇಗೌಡರ ಆಯಸ್ಸಿನ ಬಗ್ಗೆಯೇ ಮಾತನಾಡುವ ಶಾಸಕನ ಕೀಳು ಮನಸ್ಥಿತಿ ಎಂಥದ್ದು ಎಂಬುದು ಗೊತ್ತಾಗಿದೆ.

ದೇವೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಶಾಸಕನ ವಿರುದ್ಧ ಜೆಡಿಎಸ್‌ ಕಾರ್ಯರ್ತರು ಸಿಟ್ಟಿಗೆದ್ದು ಪ್ರತಿಭಟನೆ ಮಾಡಿದ್ದನ್ನೇ ದೊಡ್ಡದು ಮಾಡಿ ದಬ್ಟಾಳಿಕೆ ಜೆಡಿಎಸ್‌ನವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡಿದರು. ಆದರೆ ನಾವೆಂದೂದಬ್ಟಾಳಿಕೆ ರಾಜಕಾರಣ ಮಾಡುವವರಲ್ಲ. ಎನರ ಪ್ರೀತಿ, ವಿಶ್ವಾಸ ಗಳಿಸಿ ರಾಜಕಾರಣ ಮಾಡಿಕೊಂಡು ಬಂದಿದ್ಧೇವೆ. ಹಾಗಾಗಿಯೇ ಜನರು ಈ ಮಟ್ಟಕ್ಕೆ ನಮ್ಮನ್ನು ಬೆಳೆಸಿದ್ದಾರೆ ಎಂದು ತಿರುಗೇಟು ನೀಡಿದರು. 

Advertisement

Udayavani is now on Telegram. Click here to join our channel and stay updated with the latest news.

Next