ಮೈಸೂರು: ಬಿಜೆಪಿ ಸರ್ಕಾರ ಶಾದಿಭಾಗ್ಯ ಮಾತ್ರವಲ್ಲದೇ ರಾಜ್ಯದ ಅಭಿವೃದ್ಧಿ ಕಾರ್ಯಗಳನ್ನು ಸಹ ಸ್ಥಗಿತ ಮಾಡಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಬಿಜೆಪಿ ಶಾಸಕರೇ ತಮ್ಮ ಕ್ಷೇತ್ರಕ್ಕೆ ಅನುದಾನ ಬಂದಿಲ್ಲ ಎಂದು ಗಲಾಟೆ ಮಾಡಿದ್ದಾರೆ.
ಮಂತ್ರಿಯನ್ನು ಕೂರಿಸಿಕೊಂಡು ಅನುದಾನ ಕೊಡಿ ಎಂದು ಕೇಳಿದ್ದಾರೆ. ನೆರೆ ಹಾವಳಿಯಿಂದ ತೊಂದರೆಗೀಡಾಗಿರುವ ಜನರಿಗೆ ಹಣ ಬಿಡುಗಡೆ ಮಾಡಿ ಎಂದು ಮುಖ್ಯಮಂತ್ರಿಗಳೇ ಹೇಳಿದರೂ ಅಧಿಕಾರಿಗಳು ಬಿಡುಗಡೆ ಮಾಡಿಲ್ಲ ವೆಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ. ಇದು ಸದ್ಯದ ಬಿಜೆಪಿ ಸರ್ಕಾರದ ಸ್ಥಿತಿ ಎಂದು ಕುಟುಕಿದರು.
ಇದೇ ವೇಳೆ, ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ, ಕೃಷಿ ಸಚಿವರೇ, ನಾಲಿಗೆ ಇದೆ ಎಂದು ತೆವಲಿಗೆ ಮಾತನಾಡಬೇಡಿ. ಸುಮ್ಮನೆ ಸುಳ್ಳು ಹೇಳಿಕೊಂಡು ಓಡಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿ.ಸಿ.ಪಾಟೀಲ್ ಅವರಿಗೆ ಸಾಲಮನ್ನಾದ ಬಗ್ಗೆ ಮಾಹಿತಿಯೇ ಇಲ್ಲ ಎಂದರು.
ಹುಣಸೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಕೆಲ ಮುಖಂಡರು ಕಾಂಗ್ರೆಸ್ ಬೆಂಬಲಿಸಿ ದ್ದಾರೆ. ಕಾರ್ಯ ಕರ್ತರ ಶ್ರಮದೊಂದಿಗೆ ಕಟ್ಟಿರುವ ಜೆಡಿಎಸ್ ಪಕ್ಷವನ್ನು ನಿರ್ನಾಮಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸಾರ್ವತ್ರಿಕ ಚುನಾವಣೆವರೆಗೆ ಕಾಯಿರಿ.
-ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ