Advertisement
ಇದರಿಂದಾಗಿ 20ಕ್ಕೂ ಒಳಗುತ್ತಿಗೆ ನೌಕರರಾದ ಎಂಎಲ್‌ಎಚ್‌ಪಿಗಳು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಎದುರು ಶನಿವಾರ ರಾತ್ರಿಯವರೆಗೆ ಕುಳಿತು ಧರಣಿ ನಡೆಸಿದರು.
Related Articles
Advertisement
ಎನ್ ಓಸಿ ನೀಡದಿರಲು ಸಚಿವರ ಪರೋಕ್ಷ ಸೂಚನೆ?ಎಂಎಲ್‌ಎಚ್‌ಪಿಗಳೇ ಹೇಳುವ ಪ್ರಕಾರ, ಬೇರೆ ಜಿಲ್ಲೆಗಳಿಂದ ಉತ್ತರ ಕನ್ನಡಕ್ಕೆ ಬಂದು ಕೆಲಸ ಮಾಡುವವರು ಅತಿ ಕಡಿಮೆ. ಅದರಲ್ಲೂ ಈಗಾಗಲೇ ನೇಮಕಾತಿಯಾದವರು ಎನ್‌ಒಸಿ ಪಡೆದು ಬೇರೆ ಜಿಲ್ಲೆಗಳಿಗೆ ನೇಮಕಾತಿಯಾದರೆ ಉತ್ತರ ಕನ್ನಡದ ಕಥೆಯೇನು? ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ತಿಳಿಸಿದ್ದಾರಂತೆ. ಹೀಗಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಈಗಾಗಲೇ ಇರುವ ಎಂಎಲ್‌ಎಚ್‌ಪಿಗಳಿಗೆ ಎನ್‌ಒಸಿ ನೀಡದಂತೆ ಸೂಚಿಸಿದ್ದಾರಂತೆ. ಹೀಗಾಗಿ ಆರೋಗ್ಯಾಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಎಂಎಲ್‌ಎಚ್‌ಪಿಗಳು ಆರೋಪಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಎನ್‌ಒಸಿಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದೇವೆ. ಆದರೆ ಎನ್‌ಒಸಿ ನೀಡುತ್ತಿಲ್ಲ. ಕೇಳಿದರೆ ಬೇರೆ ಬೇರೆ ಕಾರಣಗಳನ್ನು ಹೇಳುತ್ತಿದ್ದಾರೆ. ನಮಗೆ ನಮ್ಮ ಜಿಲ್ಲೆಗಳಲ್ಲಿ ಕೆಲಸ ಮಾಡಲು ಸಿಕ್ಕಿರುವ ಅವಕಾಶವಿದು. ನೇಮಕಾತಿಯಾಗುತ್ತದೆಯೋ, ಇಲ್ಲವೋ ಬೇರೆ ವಿಚಾರ. ಆದರೆ ಪರೀಕ್ಷೆ ಬರೆಯಲು ಎನ್‌ಒಸಿ ನೀಡಲು ಹೀಗೆ ಸತಾಯಿಸುತ್ತಿರುವುದು ಸರಿಯಲ್ಲ. ಬೆಳಿಗ್ಗೆಯಿಂದ ರಾತ್ರಿಯವರೆಗೆ ಕಾದರೂ ಆರೋಗ್ಯಾಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ದೂರಿದ್ದಾರೆ. ಒಂದು ವೇಳೆ ನಾವು ನೇಮಕಾತಿಯಾದರೆ ಕರಾರು ಪತ್ರದಲ್ಲಿ ನಮೂದಾಗಿರುವ ಮೊತ್ತವನ್ನು ನೀಡಲು ಬದ್ಧರಿದ್ದೇವೆಂದು ಹೇಳಿದರೂ ಕೇಳುತ್ತಿಲ್ಲ. ಬೆಳಿಗ್ಗಿನಿಂದ ಕಾಯಿಸಿ, ಸಂಜೆಯ ಬಳಿಕ ಮದುವೆಯಾದವರಿಗೆ ಮಾತ್ರ ಎನ್‌ಒಸಿ ಕೊಡುತ್ತೇವೆ; ತಂದೆ-ತಾಯಿ ಇಲ್ಲದವರಿಗೆ ಅವರ ಮರಣದ ಕಾರಣವಿರುವ ಮರಣ ದಾಖಲೆ ನೀಡಿದರೆ ಎನ್‌ಒಸಿ ಕೊಡುತ್ತೇವೆಂದೆಲ್ಲ ಪೀಡಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ. ಜೀಪು ಬಿಟ್ಟು ತೆರಳಿದ ಡಿಎಚ್‌ಒ ಶರದ್ ನಾಯಕ !
ಆರು ಜಿಲ್ಲೆಗಳಲ್ಲಿ 1,307 ಎಂಎಲ್‌ಎಚ್‌ಪಿ ಹುದ್ದೆಗಳಿಗಾಗಿ ನಡೆಯಲಿರುವ ಪರೀಕ್ಷೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ಸೋಮವಾರವೇ ಕಡೆಯ ದಿನವಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಇಂದು (ಶನಿವಾರ) ಎನ್‌ಒಸಿ ಪಡೆಯಲೇಬೇಕೆಂದು ಎಂಎಲ್‌ಎಚ್‌ಪಿಗಳು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಬೆಳಿಗ್ಗೆಯಿಂದ ರಾತ್ರಿಯವರಗೂ ಕಾಯುತ್ತಿದ್ದರು. ಆದರೆ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ತಲೆ ಕೆಡಿಸಿಕೊಳ್ಳದೆ ಸರ್ಕಾರಿ ಜೀಪಿನಲ್ಲಿ ಮನೆಗೆ ಹೊರಡಲು ಮುಂದಾದಾಗ ಮತ್ತೆ ಮತ್ತೆ ಎಂಎಲ್‌ಎಚ್‌ಪಿಗಳು ಎನ್‌ಒಸಿ ಕೊಡಲು ಮನವಿ ಮಾಡಿ ಜೀಪಿಗೆ ಅಡ್ಡ ಬಂದಿದ್ದಾರೆನ್ನಲಾಗಿದೆ. ಇದರಿಂದಾಗಿ ಆರೋಗ್ಯಾಧಿಕಾರಿಗಳು ಜೀಪು ಬಿಟ್ಟು ಬೇರೆ ವಾಹನದಲ್ಲಿ ಮನೆಗೆ ತೆರಳಿದ್ದಾರೆ.