Advertisement
ಹಳೆಯ ಪ್ರವಾಸಿ ಬಂಗಲೆಯನ್ನು ದುರಸ್ತಿಗೊಳಿಸುವ ಸಲುವಾಗಿ 2 ವರ್ಷ ಗಳ ಹಿಂದೆ ಪರಿಶೀಲನೆಗೆ ಆಗಮಿಸಿದ್ದ ಜಿ.ಪಂ. ಅಧಿಕಾರಿಗಳು ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ದುರಸ್ತಿಗೆ ಯೋಗ್ಯ ವಾಗಿಲ್ಲ ಎಂದು ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕಟ್ಟಡವನ್ನು ತೆರವುಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಅದು ಇದುವರೆಗೆ ಕಾರ್ಯಗತವಾಗಿಲ್ಲ. ಕಟ್ಟಡದ ಹಿಂಭಾಗ ಭಾಗಶಃ ಕುಸಿದಿದ್ದು, ಯಾವುದೇ ಕ್ಷಣದಲ್ಲಿ ಕಟ್ಟಡ ಪೂರ್ತಿಯಾಗಿ ಧರಾಶಾಯಿಯಾಗುವ ಸಾಧ್ಯತೆಗಳಿವೆ. ಭಿಕ್ಷುಕರು ಹಾಗೂ ಅಲೆಮಾರಿಗಳು ಈ ಶಿಥಿಲ ಕಟ್ಟಡದಲ್ಲಿ ಆಶ್ರಯ ಪಡೆಯುವುದರಿಂದ ಕಟ್ಟಡ ಕುಸಿದರೆ ಜೀವಹಾನಿಯಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಅಪಾಯ ಸಂಭವಿಸುವ ಮೊದಲು ಈ ಶಿಥಿಲ ಕಟ್ಟಡವನ್ನು ತೆರವುಗೊಳಿಸಲು ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಬೇಕಿದೆ.
Related Articles
Advertisement
ಅನಂತರ 2 ಕೊಠಡಿಗಳನ್ನು ಸೇರಿಸಿ ಪುನಶ್ಚೇತನಗೊಳಿಸಿ ಈ ಕಟ್ಟಡವನ್ನು ಪ್ರವಾಸಿ ಬಂಗಲೆಯಾಗಿ ಪರಿವರ್ತಿಸಲಾಗಿತ್ತು. ಇತ್ತೀಚಿನ ಕೆಲವು ವರ್ಷಗಳಲ್ಲಿ ತಾ.ಪಂ. ಹಾಗೂ ಗ್ರಾ.ಪಂ. ಆಡಳಿತ ಇದರ ನಿರ್ವಹಣೆಯ ಹೊಣೆ ಹೊತ್ತುಕೊಂಡಿತ್ತಾದರೂ ಈಗ ಈ ಕಟ್ಟಡವನ್ನು ಯಾರೂ ಕೇಳು ವವರಿಲ್ಲದಂತಾಗಿದೆ. ಮೂಲತಃ ಸರಕಾರಿ ಸಮುದಾಯ ಆಸ್ಪತ್ರೆಗೆ ಸೇರಿದ ಈ ಜಮೀನನ್ನು ಮತ್ತೆ ಆಸ್ಪತ್ರೆಯ ಉಪಯೋಗಕ್ಕೆ ನೀಡಬೇಕೆಂದು ಈ ಹಿಂದೆ ಜಿಲ್ಲಾ ಆರೋಗ್ಯಾಧಿಕಾರಿಯವರ ಮುಖಾಂತರ ಜಿ.ಪಂ.ಗೆ ಮನವಿ ಸಲ್ಲಿಸಲಾಗಿದೆ. ಮುಂದೆ ಸಮುದಾಯ ಆಸ್ಪತ್ರೆಯು ತಾಲೂಕು ಆಸ್ಪತ್ರೆಯಾಗಿ ಉನ್ನತೀಕರಣವಾಗಬೇಕಿರುವುದರಿಂದ ಹೆಚ್ಚಿನ ಜಾಗದ ಅಗತ್ಯವಿರುವುದರಿಂದ ಸಂಬಂಧಪಟ್ಟವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕಿದೆ.
ಕಡಬದ ಹಳೆಸ್ಟೇಶನ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಗುರುತಿಸಲಾದ ಜಮೀನಿನಲ್ಲಿ ಹೊಸದಾಗಿ ಸುಸಜ್ಜಿತ ನಿರೀಕ್ಷಣ ಮಂದಿರ ನಿರ್ಮಿಸಲಾಗುವುದು. ಕಟ್ಟಡದ ವಿನ್ಯಾಸ ನಕ್ಷೆ ಸಿದ್ಧಪಡಿಸಲಾಗಿದ್ದು, ಶೀಘ್ರ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಕಡಬ ಪೇಟೆಯಲ್ಲಿರುವ ಹಳೆಯ ಪ್ರವಾಸಿ ಬಂಗಲೆಯ ಶಿಥಿಲ ಕಟ್ಟಡವನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು.–ಎಸ್.ಅಂಗಾರ, ಮೀನುಗಾರಿಕೆ ಮತ್ತು ಬಂದರು ಸಚಿವರು
– ನಾಗರಾಜ್ ಎನ್.ಕೆ.