Advertisement
ದೇವನಹಳ್ಳಿ: ಮುಖ್ಯಮಂತಿ ಕುಮಾರಸ್ವಾಮಿ ಮಂಡಿಸಿರುವ ಬಜೆಟ್‌ನಲ್ಲಿ ಬೆಂಗ ಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿಗೆ ಯಾವುದೇ ಕೊಡುಗೆಗಳನ್ನು ಘೋಷಿಸದಿರುವುದು ಜನತೆಯಲ್ಲಿ ನಿರಾಶೆ ಹುಟ್ಟಿಸಿದೆ.
Related Articles
Advertisement
ಕೃಷಿ ಮಾರುಕಟ್ಟೆ ಬರಲಿಲ್ಲ: ತಾಲೂಕಿನಲ್ಲಿ ಹಲವಾರು ಸಮಸ್ಯೆಗಳಿದ್ದು, ಈ ಬಜೆಟ್‌ನಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಅನುದಾನ ಬರುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ, ಯಾವುದೇ ಯೋಜನೆಗಳು ಈಡೇ ರಿಲ್ಲ. ರೈತರಿಗೆ ಹಲವಾರು ಯೋಜನೆಗಳನ್ನು ರೂಪಿಸಬಹುದಾಗಿತ್ತು. ತಾಲೂಕಿನಲ್ಲಿ ಅತಿ ಹೆಚ್ಚು ಕೃಷಿ ಮತ್ತು ತೋಟ ಮಾಡುತ್ತಿರುವ ರೈತರಿಗೆ ಕೃಷಿ ಮಾರುಕಟ್ಟೆಯಾಗುತ್ತದೆ ಎಂಬ ಆಸೆ ಹುಸಿಯಾಗಿದೆ ಎಂದು ರೈತ ನಾರಾಯಣಸ್ವಾಮಿ ತೀವ್ರ ಬೇಸರ ವ್ಯಕ್ತ ಪಡಿಸಿದರು.
ಜಿಲ್ಲೆಗೆ ಯಾವುದೇ ಕೊಡುಗೆಯಿಲ್ಲ: ಶಾಶ್ವತ ನೀರಾವರಿ ವಿಚಾರವಾಗಿ ಹೆಚ್ಚಿನ ಅನುದಾನ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ರೈತರಿಗೆ ಹೆಚ್ಚಿನ ಜನಪರ ಕಾರ್ಯಕ್ರಮಗಳನ್ನು ನೀಡುತ್ತಾರೆಂಬ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಸರ್ಕಾರ ಬಜೆಟ್‌ನಲ್ಲಿ ಜಿಲ್ಲೆಗೆ ಕೊಡುಗೆ ನೀಡು ವುದರಲ್ಲಿ ಹಿಂದೇಟು ಹಾಕಿದೆ. ಬಜೆಟ್‌ನಲ್ಲಿ ಒಂದೇ ಒಂದು ಯೋಜನೆ ನೀಡದಿರು ವುದು ಬೇಸರವಾಗಿದೆ ಎಂದು ರಾಜ್ಯ ರೈತಸಂಘದ ಉಪಾಧ್ಯಕ್ಷ ವೆಂಕಟನಾರಾ ಯಣಪ್ಪ ಹೇಳಿದರು.
ರೈತರಿಗೆ ಬಂಪರ್ ಕೊಡುಗೆ: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿ ರುವ ಬಜೆಟ್‌ನಲ್ಲಿ ರೈತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ರೈತರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಪ್ರತಿ ಹೋಬಳಿಗೆ 4 ವರ್ಷದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಮಾಡುವುದರ ಮೂಲಕ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತದೆ. ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಬದಲಾವಣೆ ಸೇರಿದಂತೆ ಅನೇಕ ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಜಿಪಂ ಸದಸ್ಯ ಲಕ್ಷ್ಮೀನಾರಾಯಣ್ ಹೇಳಿದರು.
ಹೆಚ್ಚಿನ ಅನುದಾನ ಬರಲಿಲ್ಲ: ತಾಲೂಕು ಸಾಕಷ್ಟು ಹಿಂದುಳಿದಿದ್ದು, ಮೈತ್ರಿ ಸರ್ಕಾರದ ಶಾಸಕರು ಇರುವುದರಿಂದ ತಾಲೂಕಿಗೆ ಹೆಚ್ಚಿನ ಅನುದಾನದ ನಿರೀಕ್ಷೆ ಇತ್ತು. ಆದರೆ, ಅದು ಹುಸಿಯಾಗಿದೆ. ತಾಲೂಕಿನಲ್ಲಿ ಹಲವಾರು ಸಮಸ್ಯೆಗಳು ಕಾಡುತ್ತಿವೆ. ಅವು ಗಳ ಪರಿಹಾರ ಬಜೆಟ್‌ನಲ್ಲಿ ಆಗಲಿದೆ ಎಂಬ ಆಶಾಭಾವನೆ ಇಲ್ಲದಂತಾಗಿದೆ ಎಂದು ಜಿಲ್ಲಾ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಚಾಲಕ ಡಿ.ಸಿ.ಅಂಬರೀಶ್ ಹೇಳುತ್ತಾರೆ.
ಸಿಎಂ ಉತ್ತಮ ಬಜೆಟ್ ಮಂಡಿಸಿದ್ದಾರೆ. ಪ್ರತಿ ಜನರಿಗೆ ಅನುಕೂಲಕರ ಬಜೆಟ್ ಮಾಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿ ಕಾರ ನಡೆಸುವ ಸಿಇಟಿ ಪರೀಕ್ಷೆಯಲ್ಲಿ ಪಾರದರ್ಶ ಕತೆ ಮತ್ತು ಸುರಕ್ಷತೆ ವರ್ಧಿ ಸಿದೆ. ಸಿಇಟಿ ಪರೀಕ್ಷೆಯನ್ನು ಆನ್‌ಲೈನ್ ಮೂಲಕ ನಡೆಸಲು ಕ್ರಮ ಕೈಗೊಂಡಿದ್ದಾರೆ. ನಕಲಿ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳ ಹಾವಳಿ ತಪ್ಪಿಸಲು ಪರೀಕ್ಷಾ ಪದ್ಧತಿಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಉತ್ತಮ ಕ್ರಮ ಕೈಗೊಂಡಿದ್ದಾರೆ ಎಂದು ಪುರಸಭಾ ಸದಸ್ಯ ಜಿ.ಎ.ರವೀಂದ್ರ ತಿಳಿಸಿದರು.