Advertisement

“ಸಕಾಲ’ದಲ್ಲಿ “ಸೇವೆ’ಒದಗಿಸಲು ಜಿಲ್ಲಾಧಿಕಾರಿ ಸೂಚನೆ

01:26 PM Oct 17, 2020 | Suhan S |

ಗದಗ: ಸಕಾಲ ಸೇವೆಯಲ್ಲಿ ಸ್ವೀಕೃತವಾಗಿರುವ ಅರ್ಜಿಗಳನ್ನು ವಿಳಂಬ ಮಾಡದೇ ಸಾರ್ವಜನಿಕರಿಗೆ ಕಾಲಮಿತಿಯೊಳಗೆ ಸೇವೆ ಒದಗಿಸಬೇಕು. ಜಿಲ್ಲೆಯಲ್ಲಿ ಅವಧಿ ಮೀರಿ ಬಾಕಿ ಉಳಿದಿರುವ ಪ್ರಕರಣ ವಿಚಾರಣೆ ನಡೆಸಿ, ತ್ವರಿತವಾಗಿ ಇತ್ಯರ್ಥಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯಗಳ ಸಕಾಲ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಕಾಲ ಸೇವೆ ನಾಗರಿಕರಿಗೆ ಸಮಯಬದ್ಧವಾಗಿ ನೀಡಿ, ಸಮರ್ಪಕಅನುಷ್ಠಾನಗೊಳಿಸಬೇಕು. ಸಕಾಲದಲ್ಲಿಸ್ವೀಕೃತವಾಗಿರುವ ಅರ್ಜಿ ವಿನಾಕಾರಣ ಅಥವಾ ಉದ್ದೇಶಪೂರಿತವಾಗಿತಿರಸ್ಕೃತಗೊಳಿಸಬಾರದು. ನಿಗದಿತ ಅವಧಿಯೊಳಗೆ ಅರ್ಜಿಗಳ ವಿಲೇವಾರಿ ಆಗುವಂತೆ ಕ್ರಮ ವಹಿಸಬೇಕು ಎಂದರು.

ಸಕಾಲ ಸೇವೆಯಲ್ಲಿ ತಾಂತ್ರಿಕ ದೋಷಗಳು ಉದ್ಭವಿಸಿದಲ್ಲಿ ಸಕಾಲಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಸಕಾಲ ಸೇವೆ ಒದಗಿಸುತ್ತಿರುವ ಇಲಾಖೆಯಲ್ಲಿ ಸಾರ್ವಜನಿಕರಿಗೆ ಕಾಣಿಸುವಂತೆ ಕಡ್ಡಾಯವಾಗಿ ನಾಮಫಲಕ ಅಳವಡಿಸಬೇಕು. ಪ್ರತಿನಿತ್ಯ ಅಧಿಕಾರಿಗಳು ಕಚೇರಿಗೆ ಹಾಜರಾದ ತಕ್ಷಣ ಸಕಾಲ ಸೇವೆಯಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಸಕಾಲ ಸೇವೆ ನೀಡುತ್ತಿರುವ ಜಿಲ್ಲೆಯ ಎಲ್ಲ ಇಲಾಖೆಗಳು ತ್ವರಿತ ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಚುರುಕಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಸಕಾಲ ಯೋಜನೆ ಯಶಸ್ವಿಗೊಳಿಸಬೇಕು ಎಂದರು.

ನಿರಂತರ ಮಳೆಯಿಂದ ಹಾನಿಯಾಗಿರುವ ಬೆಳೆಗಳ ಬಗ್ಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಕೈಗೊಂಡಿರುವಜಂಟಿ ಬೆಳೆ ಸಮೀಕ್ಷೆ ಕಾರ್ಯ ಶೀಘ್ರವೇ ಪೂರ್ಣಗೊಳಿಸಬೇಕು. ಬೆಳೆ-ಮನೆಹಾನಿಯಾಗಿರುವ ಕುರಿತು ವರದಿ ಸಲ್ಲಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಮಳೆ ಪ್ರಮಾಣ ಕಡಿಮೆಯಾದ ನಂತರ ಜಿಲ್ಲೆಯಲ್ಲಿ ಹಾನಿಗೊಳಗಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಆದೇಶಿಸಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಸತೀಶ್‌ ಕುಮಾರ ಎಂ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್‌.ಎನ್‌. ರುದ್ರೇಶ, ಜಿಪಂ ಉಪ ಕಾರ್ಯದರ್ಶಿಬಿ.ಕಲ್ಲೇಶ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್‌. ರುದ್ರೇಶಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕವೀರಯ್ಯಸ್ವಾಮಿ ಬಿ., ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿ.ಎಲ್‌. ಬಾರಾಟಕೆ, ವಯಸ್ಕರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ್‌ ಇದ್ದರು.

Advertisement

ಜಿಲ್ಲೆಯಲ್ಲಿ 45 ಇಲಾಖೆಗಳಲ್ಲಿ 524 ಸಕಾಲ ಸೇವೆ ಒದಗಿಸಲಾಗುತ್ತಿದ್ದು, ಸಕಾಲ ಅರ್ಜಿಗಳ ಸ್ವೀಕೃತಿಯಲ್ಲಿ ಇಳಿಕೆಯಾಗುತ್ತಿದೆ. ಅಲ್ಲದೇ ಕೆಲವು ಇಲಾಖೆಗಳಲ್ಲಿಶೂನ್ಯ ಅರ್ಜಿಗಳ ಸ್ವೀಕೃತಿಯಾಗಿರುವ ಬಗ್ಗೆ ಗಮನಿಸಲಾಗಿದೆ. ಸಂಬಂಧಿಸಿದ ಮೇಲಾಧಿಕಾರಿಗಳು ಕಚೇರಿಗಳಿಗೆ ಭೇಟಿ ನೀಡಿ ಸಕಾಲದಡಿ ಶೂನ್ಯ ಸ್ವೀಕೃತಿಗೆ ಕಾರಣಗಳ ಬಗ್ಗೆ ವರದಿ ನೀಡಬೇಕು. – ಎಂ. ಸುಂದರೇಶ ಬಾಬು, ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next