ಅಂಗಡಿ ಮುಂಗಟ್ಟು ಮುಚ್ಚಿ ಗೌರವ ಸಲ್ಲಿಸಿ
ಶಿರಾ: ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಡಾ.ಶಿವಕುಮಾರ ಸ್ವಾಮೀಜಿ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿರುವ ತಾಲೂಕು ವೀರಶೈವ ಸಮಾಜ, ವಿವಿಧ ಸಂಘ ಸಂಸ್ಥೆಗಳು, ಮಂಗಳವಾರ ವ್ಯಾಪಾರ ವಹಿವಾಟು ಬಂದ್ ಮಾಡಿ ಶ್ರೀಗಳಿಗೆ ಗೌರವ ಸಲ್ಲಿಸಲು ನಿರ್ಧರಿಸಿವೆ.
Advertisement
ನಗರದ ವಿದ್ಯಾಗಣಪತಿ ದೇವಾಲಯ ರಸ್ತೆಯಲ್ಲಿನ ವೀರಶೈವ ಲಿಂಗಾಯಿತ ಹಿತರಕ್ಷಣಾ ಸಮಿತಿ ಕಚೇರಿಯಲ್ಲಿ ಸೋಮವಾರ ಸಂಜೆ ಸಭೆ ಸೇರಿದ್ದ ವಿವಿಧ ವರ್ತಕ ಸಂಘದ ಪದಾಧಿಕಾರಿಗಳು, ಸ್ವಾಮೀಜಿ ಅವರ ಗೌರವಾರ್ಥ ಮಂಗಳವಾರ ಸ್ವಯಂಪ್ರೇರಿತ ವಹಿವಾಟು ಬಂದ್ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಾಜಸ್ಥಾನ ಮೂಲದ ವರ್ತಕರೂ ಬೆಂಬಲ ಘೋಷಿಸಿದ್ದಾರೆ.
Related Articles
Advertisement
ಪ್ರವಾಸಿ ಮಂದಿರ ವೃತ್ತದಲ್ಲಿ ಮೂರು ದಿಕ್ಕಿನಿಂದ ಬರುತ್ತಿದ್ದ ವಾಹನಗಳನ್ನು ನಿಯಂತ್ರಿಸುವಲ್ಲಿ ಹೈರಾಣಾಗಿದ್ದ ಪೊಲೀಸರ ನೆರವಿಗೆ ಕೆಲ ಸ್ಥಳೀಯ ಯುವಕರು, ಸ್ವಯಂ ಪ್ರೇರಿತವಾಗಿ ಟ್ರಾಫಿಕ್ ನಿಯಂತ್ರಿಸುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.
ಚಿಕ್ಕನಾಯಕನಹಳ್ಳಿಗೂ ಸಿದ್ಧಗಂಗಾ ಶಿಕ್ಷಣ ಸೇವೆಚಿಕ್ಕನಾಯಕನಹಳ್ಳಿ: ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದದಿಂದಾಗಿ ತಾಲೂಕಿನಲ್ಲಿಯೂ ಸಿದ್ಧಗಂಗಾ ವಿದ್ಯಾಸಂಸ್ಥೆಗಳು ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡುತ್ತಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ವಿದ್ಯಾವಂತರನ್ನಾಗಿ ಮಾಡುವ ಉದ್ದೇಶದಿಂದ ಪೂಜ್ಯ ಸ್ವಾಮೀಜಿಯವರು 1969ರಲ್ಲಿ ಕಂದಿಕೆರೆಯಲ್ಲಿ ಸಿದ್ಧಗಂಗಾ ಪ್ರೌಢಶಾಲೆ ಪ್ರಾರಂಭಿಸಿದರು. 1981ರಲ್ಲಿ ಕುಪ್ಪುರ ಗ್ರಾಮದಲ್ಲಿ ವಿವೇಕಾನಂದ ಪ್ರೌಢಶಾಲೆ ಪ್ರಾರಂಭಿಸಿ ತಾಲೂಕಿನ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಜೊತೆಗೆ ಹಲವು ಶಿಕ್ಷಕರಿಗೆ ಉದ್ಯೋಗ ಒದಗಿಸಿದ್ದಾರೆ. ಶಿಕ್ಷಣ ಎಂದರೇ ಶ್ರೀಮಂತರಿಗೆ ಎನ್ನುವ ಕಾಲದಲ್ಲಿ ಕಂದಿಕೆರೆ ಹಾಗೂ ಕುಪ್ಪೂರಿನ ಅಕ್ಕಪಕ್ಕದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಬೇಕು ಎಂದರೆ, ಬೇರೆ ತಾಲೂಕುಗಳಿಗೆ ಅಥವಾ ಪಟ್ಟಣಕ್ಕೆ ಬರಬೇಕಾಗಿತ್ತು. ಇದನ್ನು ಅರಿತ ಸ್ವಾಮೀಜಿಗಳು ಉಭಯ ಗ್ರಾಮಗಳಲ್ಲಿ ಪ್ರೌಢಶಾಲೆ ಪ್ರಾರಂಭಿಸುವ ಮೂಲಕ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಶಾಲೆಯಲ್ಲಿ ಓದಿ ನೂರಾರು ವಿದ್ಯಾರ್ಥಿಗಳು ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ. ಸೋಮವಾರ ಸಿದ್ಧಗಂಗಾ ಶ್ರೀ ನಿಧನಕ್ಕೆ ಶಾಲೆಯ ನೂರಾರು ವಿದ್ಯಾರ್ಥಿಗಳು, ಶಿಕ್ಷಕರು ಸಂತಾಪ ಸೂಚಿಸುವ ಮೂಲಕ ಸ್ವಾಮೀಜಿ ಅವರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು.