Advertisement
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಿರಿಯ ನಾಯಕರು, ಜನಪ್ರತಿನಿಧಿಗಳ ಜತೆಸೇರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ಕೇರಳದ ವಯನಾಡು ಜಿಲ್ಲೆಗೆ ಕಳುಹಿಸಿಕೊಡಲಾಗುವುದು. ಇದಕ್ಕಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸ ಲಾಗುವುದು ಎಂದು ಹೇಳಿದರು.
ವಯನಾಡು ಜಿಲ್ಲೆಯಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ದ.ಕ. ಜಿಲ್ಲಾಡಳಿತ ವತಿಯಿಂದಲೂ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ಕಳುಹಿಸಿಕೊಡಲು ಕ್ರಮ ವಹಿಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಯವರ ಜತೆ ಚರ್ಚಿಸಿದ್ದೇನೆ ಎಂದು ಖಾದರ್ ತಿಳಿಸಿದರು.