Advertisement

ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಕನಸು ನನಸಾಗಬೇಕಿದೆ

05:24 PM Oct 26, 2022 | Team Udayavani |

ಪಣಜಿ: ಗೋವಾದಲ್ಲಿ 4 ಲಕ್ಷಕ್ಕೂ ಹೆಚ್ಚು ಕನ್ನಡಿಗರು ನೆಲೆಸಿದ್ದು ಈ ಕನ್ನಡಿಗರ ಏಕೈಕ ವೇದಿಕೆ ಕನ್ನಡ ಭವನ ನಿರ್ಮಾಣ ಕನಸು ನನಸಾಗಬೇಕಿದೆ. ಇದಕ್ಕಾಗಿ ಮೊದಲು ನಮಗೆ ಸೂಕ್ತ ಜಾಗದ ಅಗತ್ಯವಿದೆ. ಗೋವಾ ಸರ್ಕಾರ ಸೂಕ್ತ ಜಾಗ ನೀಡಿದರೆ ಕನ್ನಡ ಭವನದ ಕನಸು ಶೀಘ್ರ ನನಸಾಗಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ. ಸಿದ್ಧಣ್ಣ ಮೇಟಿ ಅಭಿಪ್ರಾಯಪಟ್ಟರು.

Advertisement

ಗೋವಾದ ವಾಸ್ಕೊದಲ್ಲಿ ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್ ರವರ 137 ನೇಯ ಜನ್ಮ ದಿನದ ಕಾರ್ಯಕ್ರಮದಲ್ಲಿ ಮಿರ್ಜಾ ಇಸ್ಮಾಯಿಲ್ ರವರ ಭಾವಚಿತ್ರಕ್ಕೆ ಪುಷ್ಪ ಹಾರ ಸಮರ್ಪಿಸಿ ಸಿದ್ಧಣ್ಣ ಮೇಟಿ ಮಾತನಾಡುತ್ತಿದ್ದರು.

ಗೋವಾದಲ್ಲಿ 30 ಕ್ಕೂ ಹೆಚ್ಚು ಕನ್ನಡ ಸಂಘಟನೆಗಳಿವೆ. ಈ ಎಲ್ಲ ಸಂಘಟನೆಗಳ ಬೇಡಿಕೆ ಕನ್ನಡ ಭವನ ನಿರ್ಮಾಣವಾಗಬೇಕು ಎಂಬುದೇ ಆಗಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನವೂ ಮುಂದುವರೆದಿದೆ. ಗೋವಾದಲ್ಲಿ ಎಲ್ಲ ಕ್ಷೇತ್ರಗಳ ಅಭಿವೃದ್ಧಿಯಲ್ಲಿಯೂ ಕನ್ನಡಿಗರ ಪಾಲಿದೆ ಎಂದು ಸಿದ್ಧಣ್ಣ ಮೇಟಿ ನುಡಿದರು.

ಈ ಸಂದರ್ಭದಲ್ಲಿ ವಿಜಯಪುರ ಜಿ.ಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ, ಬಂಜಾರ ಸಮಾಜದ ರಾಷ್ಟ್ರೀಯ ಕಾರ್ಯದರ್ಶಿ ಸುರೇಶ್ ರಜಪೂತ್, ಕಸಾಪ ಗೋವಾ ರಾಜ್ಯ ಘಟಕದ ಗೌ. ಕಾರ್ಯದರ್ಶಿ ನಾಗರಾಜ ಗೋಂದಕರ್, ಪ್ರಕಾಶ ಭಟ್, ಕಸಾಪ ಪರಿಶಿಷ್ಠ ಜಾತಿ ಪ್ರತಿನಿಧಿ ತವರಪ್ಪ ಲಮಾಣಿ , ಮತ್ತಿತರರು ಉಪಸ್ಥಿತರಿದ್ದರು.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next