Advertisement

Shivamogga: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು, ನಾಲ್ವರಿಗೆ ಗಾಯ

09:24 AM Jul 09, 2024 | Team Udayavani |

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ.

Advertisement

ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಾರಿನಲ್ಲಿದ್ದವರು ಚಿತ್ರದುರ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು ಆಯನೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್‌ ಡಿಸೈರ್‌ ಕಾರು ಹಳ್ಳಕ್ಕೆ ಬಿದ್ದಿದ್ದೆ.

ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Jani Chacko Uthup: ಹೃದಯಸ್ತಂಭನದಿಂದ ಖ್ಯಾತ ಗಾಯಕಿ ಉಷಾ ಉತ್ತುಪ್‌ ಪತಿ ನಿಧನ

Advertisement

Advertisement

Udayavani is now on Telegram. Click here to join our channel and stay updated with the latest news.

Next