Advertisement

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಸವಾರನಿಗೆ ಗಾಯ

07:40 PM Jan 23, 2023 | Team Udayavani |

ಸುಳ್ಯ: ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಉರುಳಿದ್ದು, ಅದರಲ್ಲಿದ್ದ ಓರ್ವನ ಕಾಲು ಜಖಂಗೊಂಡ ಘಟನೆ ಸುಳ್ಯದ ಪರಿವಾರಕಾನದ ಬಳಿ ರವಿವಾರ ರಾತ್ರಿ ಸಂಭವಿಸಿದೆ.

Advertisement

ಮಣಿಪಾಲ ಮೂಲದ ಸಂಸ್ಥೆಯೊಂದಕ್ಕೆ ಸೇರಿದ ಇನೋವಾ ಕಾರು ಮಡಿಕೇರಿಗೆ ತೆರಳಿ ಮರಳಿ ಮಣಿಪಾಲಕ್ಕೆ ಹೋಗುತ್ತಿದ್ದ ವೇಳೆ ಸುಳ್ಯದ ಪರಿವಾರಕಾನ ಸರ್ವಿಸ್‌ ಸ್ಟೇಷನ್‌ ಬಳಿ ಈ ಘಟನೆ ಸಂಭವಿಸಿದೆ. ಕಾರು ಉರುಳಿದ ಬಳಿಕ ಅಲ್ಲೇ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಕಾರು ನಿಂತಿದೆ.

ಅಪಘಾತದಿಂದ ಕಾರಿನಲ್ಲಿದ್ದ ಓರ್ವನ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕ್ರೇನ್ ಮೂಲಕ ಕಾರನ್ನು ಮೇಲೆಕೆತ್ತಲಾಯಿತು ಎಂದು ತಿಳಿದುಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next