Advertisement

KSRTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ!

05:57 PM Sep 08, 2024 | Team Udayavani |

ಹನೂರು( ಚಾಮರಾಜನಗರ): ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ಕೆಳಗೆ ಬಿದ್ದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಶನಿವಾರ ಸಂಜೆ(ಸೆ.7) ಜರುಗಿದೆ.

Advertisement

ಘಟನೆ ವಿವರ:
ಕೊಳ್ಳೇಗಾಲ, ಹನೂರು ಪಟ್ಟಣದಿಂದ ಅಜ್ಜೀಪುರ ಅಂಬಿಕಾಪುರ, ನಾಗಣ್ಣನಗರ, ಪುದು ರಾಮಪುರ, ರಾಮಾಪುರ ಮಾರ್ಗವಾಗಿ ಸಂಚರಿಸುವ ಬಸ್ ಚಾಲಕ ಕಬ್ಬಳ್ಳಿ ಗ್ರಾಮದ ಸುಭಾಷ್ ಎಂಬುವವರು ಚಾಲನೆ ಮಾಡುತ್ತಿದ್ದಾಗ ಶನಿವಾರ ಏಕಾಏಕಿ ಮೂರ್ಚೆ ಕಾಣಿಸಿಕೊಂಡು ಕೆಳಗೆ ಬಿದ್ದಿದ್ದಾರೆ. ಬಸ್ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಿಂತುಕೊಂಡಿದೆ ಆದರೆ ಈ ಸಮಯದಲ್ಲಿ ವಿದ್ಯುತ್ ಸಂಪರ್ಕ ಇಲ್ಲದೆ ಇರುವುದರಿಂದ ಅತಿ ದೊಡ್ಡ ಅನಾಹುತ ತಪ್ಪಿದೆ.

ಇದಲ್ಲದೆ ಬಸ್ನಲ್ಲಿ ಪ್ರಯಾಣಿಕರು ಒಬ್ಬರು ಹಾಗೂ ನಿರ್ವಾಹಕರು ಮಾತ್ರ ಇದ್ದಿದ್ದರಿಂದ ಯಾವುದೇ ಗಾಯಗಳಾಗಿಲ್ಲ, ಪ್ರತಿದಿನ ಈ ಮಾರ್ಗವಾಗಿ ಸುಮಾರು 40ಕ್ಕೂ ಹೆಚ್ಚು ಶಾಲಾ-ಕಾಲೇಜು ವಿದ್ಯಾರ್ಥಿಗಳೇ ಸಂಚಾರ ಮಾಡುತ್ತಿದ್ದರು ಗೌರಿ ಗಣೇಶ ಹಬ್ಬದ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ಇದ್ದ ಹಿನ್ನೆಲೆ ಯಾವೊಬ್ಬ ವಿದ್ಯಾರ್ಥಿಗಳು ಆಗಮಿಸಿರಲಿಲ್ಲ ಇದರಿಂದ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ಈಗಾಗಲೇ ಚಾಲಕ ಸುಭಾಷ್ ಎಂಬುವವರು ಕಳೆದ 12 ವರ್ಷಗಳಿಂದ ಸಂಸ್ಥೆಯಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಎರಡು ಅಪಘಾತ ಮಾಡಿದ್ದಾರೆ ಎಂದು ತಿಳಿದು ಬಂದಿದೆ ಇದಲ್ಲದೆ ಇವರಿಗೆ ಅನಾರೋಗ್ಯ ಸಮಸ್ಯೆ (ಮೂರ್ಛೆ) ರೋಗ ಇರುವುದರಿಂದ ಇವರಿಗೆ ಬೇರೆ ಜವಾಬ್ದಾರಿ ನೀಡುವ ಬದಲು ಚಾಲಕನ ಹುದ್ದೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇನ್ನು ಮುಂದಾದರೂ ಸಾರ್ವಜನಿಕರು ಶಾಲಾ-ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಆರೋಗ್ಯವಂತ ಚಾಲಕರನ್ನು ನೇಮಕ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಚಾಲಕ ಸುಭಾಷ್ ರವರು ಶನಿವಾರ ಏಕಾಏಕಿ ಕಾಣಿಸಿಕೊಂಡ ಮೂರ್ಛೆ ರೋಗದಿಂದ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇವರು ಚೇತರಿಸಿಕೊಂಡ ಬಂದ ನಂತರ ಇವರಿಗೆ ಬಸ್ ಚಾಲನೆ ಮಾಡಲು ಅವಕಾಶ ನೀಡದೆ ಬೇರೆ ಜವಾಬ್ದಾರಿ ನೀಡಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

Advertisement

”ಚಾಲಕನಿಗೆ ಮೂರ್ಛೆ ರೋಗ ಇರುವುದು ಗಮನಕ್ಕೆ ಬಂದಿಲ್ಲ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸುತ್ತೇನೆ” ಎಂದು ಜಿಲ್ಲಾ ವಿಭಾಗೀಯ ನಿಯಂತ್ರಣ ಅಧಿಕಾರಿ ಅಶೋಕ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next