Advertisement

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

10:45 PM Jul 06, 2024 | Team Udayavani |

ದಾವಣಗೆರೆ: ಕಾರು ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಕೆಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಶನಿವಾರ ರಾತ್ರಿ ಸಿದ್ದಮ್ಮ ಪಾರ್ಕ್ ಬಳಿ ನಡೆದಿದೆ.

Advertisement

ದಾವಣಗೆರೆ ತಾಲೂಕಿನ ನೇರ್ಲಿಗೆ ಗ್ರಾಮದ ಕುಟುಂಬವೊಂದು ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಕಾರು ಚಾಲಕನಿಗೆ ಹೃದಯಾಘಾತವಾಗಿದೆ. ಹಾಗಾಗಿ ಕಾರಿನ ನಿಯಂತ್ರಣ ತಪ್ಪಿದಂತಾಗಿ ಆಟೋರಿಕ್ಷಾ, ನಂತರ ಬೈಕ್ ಗೆ ಡಿಕ್ಕಿ ಹೊಡೆದಿದೆ. ರಸ್ತೆ ಅಕ್ಕಪಕ್ಕದಲ್ಲಿದ್ದವರಿಗೂ ಡಿಕ್ಕಿ ಹೊಡೆದಿದೆ.

ವನಜಾಕ್ಷಮ್ಮ, ಸಂಪತ್, ಓರ್ವ ಬಾಲಕಿ ಸೇರಿದಂತೆ ನಾಲ್ಕು ಮಂದಿ ಹೆಚ್ಚು ಗಾಯಗೊಂಡಿದ್ದು, ಸದ್ಯಕ್ಕೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ವನಜಾಕ್ಷಮ್ಮ ಎಂಬುವರ ಕಾಲುಗಳಿಗೆ ಗಂಭೀರವಾದ ಗಾಯಗಳಾಗಿವೆ. ಪವಾಡ ಸದೃಶ ಎನ್ನುವಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕನನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Advertisement
Advertisement

Udayavani is now on Telegram. Click here to join our channel and stay updated with the latest news.

Next