ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲಿ ಪಾರ್ಟಿಗಳಿಗೆ ಪೂರೈಕೆ ಮಾಡಲು ಮಾದಕ ವಸ್ತು ತರಿಸಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ತಮಿಳುನಾಡು, ಕೇರಳ ಮೂಲದ ಆರು ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 33 ಲಕ್ಷ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಡಾರ್ಕ್‌ವೆಬ್‌ನಲ್ಲಿ ಬಿಟ್‌ಕಾಯಿನ್ ಮೂಲಕ ಹೈಡೋ ಗಾಂಜಾ ಸೇರಿ ಪಾರ್ಟಿ ಡ್ರಗ್ಸ್ ತರಿಸುತ್ತಿದ್ದ ತಮಿಳುನಾಡಿನ ಸೇಲಂ ಮೂಲದ ಇವೆಂಟ್ ಮ್ಯಾನೇಜ್‌ಮೆಂಟ್ ಮಾಲೀಕ ಸೇರಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸೇಲಂ ಮೂಲದ ಲಿಂಗೇಶ್ ನಾರಾಯಣ (23), ಸೂರಜ್ (24), ಶಾರೂಕ್ ಖಾನ್ (27) ಬಂಧಿತರು. ಆರೋಪಿಗಳಿಂದ 24 ಎಕ್ಟೈಸಿ ಮಾತ್ರೆಗಳು, 40 ಗ್ರಾಂ ಹೈಡ್ರೋ ಗಾಂಜಾ, 2 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿರುವ ಆರೋಪಿಗಳು ಆಡುಗೋಡಿಯಲ್ಲಿವಾಸವಾಗಿದ್ದಾರೆ. ಲಿಂಗೇಶ್ ನಾರಾಯಣ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಡಿಜೆಯಾಗಿದ್ದು, ಸೂರಜ್, ಇವೆಂಟ್ ಮ್ಯಾನೇಜ್‌ಮೆಂಟ್ ನಡೆಸುತ್ತಿದ್ದಾನೆ. ಶಾರೂಕ್ ಖಾನ್ ಡಿಜಿಟಲ್ ಮಾರ್ಕೆಟಿಂಗ್‌ನಲ್ಲಿ ಕೆಲಸ ಮಾಡುತ್ತಿದ್ದ. ಆರೋಪಿಗಳು ಡಾರ್ಕ್‌ವೆಬ್ ಮೂಲಕ ಹೈಡ್ರೋ ಗಾಂಜಾ, ಎಕ್ಸೆ$r„ಸಿ ಸೇರಿ ವಿವಿಧ ಮಾದರಿಯ ಡ್ರಗ್ಸ್‌ಗಳನ್ನು ಬಿಟ್‌ಕಾಯಿನ್ ಮೂಲಕ ವ್ಯವಹಾರ ನಡೆಸಿ ನಗರಕ್ಕೆ ತರಿಸುತ್ತಿದ್ದರು. ಬಳಿಕ ಟೆಕಿಗಳು, ವಿದ್ಯಾರ್ಥಿಗಳು ಹಾಗೂ ಹೊಸ ವರ್ಷದ ಸಂದರ್ಭದಲ್ಲಿ ಹೆಚ್ಚಿನ ಬೆಲೆಗೆ ಮಾರಾಟಕಕ್ಕೆ ಸಿದ್ದತೆ ನಡೆಸಿದ್ದರು. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಆರೋಪಿಗಳು ಸಣ್ಣ-ಪುಟ್ಟ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಇದರೊಂದಿಗೆ ಆಂಧ್ರಪ್ರದೇಶ, ಒಡಿಶಾ ಮತ್ತು ಕೇರಳ ಮೂಲದ ಡ್ರಗ್ಸ್ ಪೆಡ್ಲರ್‌ಗಳಿಂದ ಕಡಿಮೆ ಮೊತ್ತಕ್ಕೆ ಮಾದಕ ವಸ್ತು ತರಿಸಿ, ಇಲ್ಲಿನ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು. ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಎಸಿಪಿ ಡಿ.ಕುಮಾರ್ ಮತ್ತು ಇನ್‌ಸ್ಪೆಕ್ಟರ್ ಆರ್. ದೀಪಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಕೇರಳದ ಮೂವರ ಬಂಧನ
ಮತ್ತೂಂದು ಪ್ರಕರಣದಲ್ಲಿ ಮಾದಕ ವಸ್ತು ಗಾಂಜಾ ಹಾಗೂ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಹಿರಣ್ (25) ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ 3 ಲಕ್ಷ ರೂ. ಮೌಲ್ಯದ 3.1 ಕೆ.ಜಿ. ಗಾಂಜಾ, 20 ಗ್ರಾಂ ಎಂಡಿಎಂಎ ಕ್ರಿಸ್ಟಲ್ ವಶಕ್ಕೆ ಪಡೆಯಲಾಗಿದೆ. ಆರೋಪಿ ನೆರೆ ರಾಜ್ಯದಿಂದ ಡ್ರಗ್ಸ್‌ಗಳನ್ನು ತರಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದ. ಈ ಮಾಹಿತಿ ಮೇರೆಗೆ ಆತನ ಮನೆ ಮೇಲೆ ದಾಳಿ ನಡೆಸಿ ಮಾಲು ಸಮೇತ ಬಂಧಿಸಲಾಗಿದೆ. ಈತನ ವಿರುದ್ಧ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಕೇರಳ ಮೂಲದ ಶ್ರೇಯಸ್ (24) ಮತ್ತು ರಾಹುಲ್ (25) ಎಂಬವರನ್ನು ಬಂಧಿಸಲಾಗಿದೆ. ಇವರಿಂದ 25 ಲಕ್ಷ ರೂ. ಮೌಲ್ಯದ 150 ಗ್ರಾಂ ಎಂಡಿಎಂಎ ಕ್ರಿಸ್ಟಲ್, 200 ಎಲ್‌ಎಸ್‌ಡಿ ಸ್ಟ್ರಿಪ್ಸ್, 25 ಎಕ್ಸೆ$r„ಸಿ ಮಾತ್ರೆಗಳು ವಶಕ್ಕೆ ಪಡೆಯಲಾಗಿದೆ.