Advertisement

ಮೋದಿ ಆಡಳಿತದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿ

12:32 AM Jun 14, 2019 | Team Udayavani |

ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಹೋಗಿದೆ. ಅಭಿವೃದ್ಧಿ ವಿಚಾರಗಳ ಬಗ್ಗೆ ಮಾತನಾಡದೆ ಭಾವನಾತ್ಮಕ ವಿಷಯಗಳನ್ನು ಹೇಳಿಕೊಂಡು ಅವರು ಐದು ವರ್ಷ ಕಾಲ ಕಳೆದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

Advertisement

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಅವರ ಐದು ವರ್ಷದ ಸರ್ಕಾರವನ್ನು ಮಾಧ್ಯಮಗಳೂ ಸೇರಿ ದೇಶದ ಜನ ಹಾಡಿ ಹೊಗಳಿದ್ದಾರೆ. ಆದರೆ, ಕಳೆದ ಐದು ವರ್ಷದಲ್ಲಿ ದೇಶದ ಜಿಡಿಪಿ ಪಾತಾಳಕ್ಕೆ ಹೋಗಿದೆ. ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಲ್ಲೇ ಶೇ.6.1ರ ಕನಿಷ್ಠ ಪ್ರಮಾಣಕ್ಕೆ ಕುಸಿದಿದೆ. ರೂಪಾಯಿ ಮೌಲ್ಯ ಅತ್ಯಂತ ಕೆಟ್ಟದ್ದಾಗಿದೆ. ನಿಜವಾಗಿ ಬಾಲಾಕೋಟ್ ದಾಳಿ ಆಗಿದ್ಯಾ? ಆ ದಾಳಿಯಲ್ಲಿ ಎಷ್ಟು ಜನ ಉಗ್ರರು ಸತ್ತರು? ಎಂಬುದನ್ನು ಇವತ್ತಿನವರೆಗೆ ಪ್ರಧಾನಿ, ರಕ್ಷಣಾ ಸಚಿವರು, ವಿದೇಶಾಂಗ ಸಚಿವರು ಹೇಳಿಲ್ಲ. ಆದರೂ ಜನ ಮೋದಿ…ಮೋದಿ… ಎನ್ನುತ್ತಾರೆ. ಯಾಕೆ ಅಂತ ಗೊತ್ತಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next