Advertisement

ನಾಗೇಶ್ ಬಂಧನದಿಂದ ನಮ್ಮ ಪೊಲೀಸರ ದಕ್ಷತೆ ಮತ್ತೊಮ್ಮೆ ಸಾಬೀತು : ಆರಗ ಜ್ಞಾನೇಂದ್ರ

12:03 PM May 14, 2022 | Team Udayavani |

ಬೆಂಗಳೂರು: ಯುವತಿಯ ಮೇಲೆ ಆಸಿಡ್ ಎರಚುವಿಕೆ ಯಂಥ ಅಮಾನುಷ ಕೃತ್ಯ ಎಸಗಿ ಪರಾರಿಯಾಗಿದ್ದ ಕಿರಾತಕ ನಾಗೇಶ್ ನನ್ನು ನಮ್ಮ ಪೊಲೀಸರು, ಅತ್ಯಂತ ಶ್ರಮ ಹಾಗೂ ದಕ್ಷತೆಯಿಂದ ನೆರೆಯ ತಮಿಳುನಾಲ್ಲಿ ಅಡಗಿದ್ದವನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಹೆಡೆಮುರಿ ಕಟ್ಟುವುದರ ಮೂಲಕ ನಮ್ಮ ಪೊಲೀಸರು, ದೇಶದಲ್ಲಿಯೇ, ಅತ್ಯಂತ ದಕ್ಷತೆಯ ಹಾಗೂ ವೃತ್ತಿಪರ ಪಡೆಯೆಂದು, ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Advertisement

ಇದಕ್ಕಾಗಿ ನಾನು ಪೊಲೀಸರನ್ನು ಅಭಿನಂದಿಸುತ್ತನೆ.ತಮಿಳು ನಾಡು ಪೊಲೀಸರೂ, ಹೀನ ಕೃತ್ಯ ನಡೆಸಿದ ಅಪರಾಧಿಯನ್ನು ಬಂಧಿಸುವ ಕಾರ್ಯದಲ್ಲಿ ನಮ್ಮ ಪೊಲೀಸರಿಗೆ ನೆರವಾಗಿದ್ದಾರೆ.ಅವರಿಗೂ ನನ್ನ ಅಭಿನಂದನೆಗಳು ಎಂದರು.

ಅಪರಾಧಿಗೆ ಉಗ್ರ ಶಿಕ್ಷೆ ಯಾಗುವಂತೆ, ಅಪರಾಧಿಯನ್ನು, ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ ದಲ್ಲಿ ಆರೋಪಿಯ ವಿಚಾರಣೆ ನಡೆಸಿ ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸ ಲಾಗುತ್ತದೆ. ಆರೋಪಿಗೆ ತಕ್ಕ ಶಿಕ್ಷೆ ಆಗುವ ಮೂಲಕ ಸಂತ್ರಸ್ತ ಮಹಿಳೆಗೆ ಹಾಗೂ ಕುಟುಂಬ ವರ್ಗಕ್ಕೆ ಸ್ವಲ್ಪವಾದರೂ ನೆಮ್ಮದಿ ದೊರಕಿದಂತಾಗುವುದು ಎಂದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಸಂತ್ರಸ್ತ ಮಹಿಳೆ, ಚೇತರಿಸಿಕೊಳ್ಳುತ್ತಿದ್ದು ಶೀಘ್ರ ಗುಣಮುಖ ವಾಗಲಿ ಎಂದು, ಪ್ರಾರ್ಥಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next