Advertisement
ನೆಹರೂ ಮೈದಾನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು, ಜನತೆಯ ಆರೋಗ್ಯ ರಕ್ಷಣೆ ಯಲ್ಲಿ ಒಂದಿಷ್ಟೂ ರಾಜಿ ಮಾಡಿಕೊಳ್ಳದೆ ಕೋವಿಡ್ ಸೋಂಕಿತರಿಗೆ ಉತ್ಕೃಷ್ಟ ಮಟ್ಟದಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಆವರಣ ವನ್ನು 5.83 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಅದೇ ರೀತಿ ಲೇಡಿಗೋಶನ್ ಆಸ್ಪತ್ರೆಯ ಆವರಣದಲ್ಲಿರುವ ಕಟ್ಟಡದಲ್ಲಿ ಎರಡನೇ ಮಹಡಿಯನ್ನು 2.31 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಯಲ್ಲಿ 1,35,841 ರೈತರ ಖಾತೆಗಳಿಗೆ ತಲಾ 10 ಸಾವಿರ ರೂ.ಗಳಂತೆ 137 ಕೋಟಿ ರೂ. ಜಮೆ ಮಾಡಲಾಗಿದೆ. ಮುಂಗಾರು ಹಂಗಾಮಿಗೆ 525 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನು ಇರಿಸಲಾಗಿದೆ. 7850 ಮೆ.ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ತಿಳಿಸಿದರು. ಕಡಲು ಮತ್ತು ಒಳನಾಡು ಮೀನು ಗಾರಿಕೆಯಲ್ಲಿ ಕರ್ನಾಟಕ ರಾಜ್ಯ ಆರನೇ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಮೀನುಗಾರಿಕೆಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನಕ್ಕೇರಬೇಕೆಂಬ ಆಶಯ ನಮ್ಮದು ಎಂದರು.
ಕೋವಿಡ್ ವಾರಿಯರ್‌ಗಳಾಗಿದ್ದು, ಸ್ವತಃ ಸೋಂಕಿಗೆ ಒಳಗಾಗಿ ಗುಣಮುಖ ರಾಗಿ ಮತ್ತೆ ಕರ್ತವ್ಯ ನಿರ್ವಹಿಸುತ್ತಿರುವ ವೆನಾÉಕ್ ಆಸ್ಪತ್ರೆ, ಪೊಲೀಸ್ ಇಲಾಖೆ, ಇತರ ವಿವಿಧ ಇಲಾಖೆಗಳ 20 ಸಿಬಂದಿಯನ್ನು ಅಭಿನಂದಿಸಿ ಸಮ್ಮಾನಿಸಲಾಯಿತು. ಬೆಳ್ತಂಗಡಿ ತಾಲೂಕಿನ ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಆಕಾಶ್ ಮಡಿವಾಳಯ್ಯ ಹಿರೇಮಠ ಅವರಿಗೆ ಜಿಲ್ಲಾಡಳಿತ ವತಿಯಿಂದ 10,000 ರೂ. ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್, ಮೇಯರ್ ದಿವಾಕರ ಪಾಂಡೇಶ್ವರ, ಡಿಸಿ ಡಾ| ರಾಜೇಂದ್ರ, ಪೊಲೀಸ್ ಆಯುಕ್ತ ಡಾ| ವಿಕಾಸ್ ಕುಮಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಮಂಗಳೂರು ತಾ.ಪಂ. ಅಧ್ಯಕ್ಷ ಮೊಹಮ್ಮದ್ ಮೋನು, ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು. ಸರಳ ಸ್ವಾತಂತ್ರ್ಯೋತ್ಸವ
ಕೊರೊನಾ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲಾಗಿತ್ತು. ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ವಿದ್ಯಾರ್ಥಿಗಳು, ಭಾರತ ಸೇವಾದಳದ ತಂಡ ಸೇರಿದಂತೆ ಪಥ ಸಂಚಲನ ಕೂಡ ಇರಲಿಲ್ಲ.
Related Articles
ನೂತನ ಕಡಬ ಮತ್ತು ಮೂಡುಬಿದಿರೆ ತಾಲೂಕುಗಳಿಗೆ ತಲಾ 10 ಕೋಟಿ ರೂ. ಮಂಜೂರಾಗಿದ್ದು, ಈ ಪೈಕಿ 2 ಕೋಟಿ ರೂ. ಬಿಡುಗಡೆಯಾಗಿದೆ. ಮೆಸ್ಕಾಂನಿಂದ 417 ಗಂಗಾ ಕಲ್ಯಾಣ ಯೋಜನೆಗೆ 314.42 ಲಕ್ಷದೊಂದಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. 151 ಕುಡಿಯುವ ನೀರಿನ ಯೋಜನೆಗೆ ವಿದ್ಯುತ್ ಸಂಪರ್ಕ ಅಳವಡಿಸಲಾಗಿದೆ. ಮೂರ್ತೆದಾರರ ಬೇಡಿಕೆಗಳಿಗೆ ಸ್ಪಂದಿಸಲಾಗಿದೆ. ಮಳೆಗಾಲ ಆಗಮನದ ಮುಂಚಿತವಾಗಿ ಪ್ರಾಕೃತಿಕ ವಿಕೋಪ ಎದುರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ವಿವರಿಸಿದರು.
Advertisement