Advertisement

27  28ರಂದು ಚುನಾವಣಾ ಆಯೋಗದ ತಂಡ ಭೇಟಿ 

07:00 AM Mar 24, 2018 | |

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ತಂಡ ಮಾ.27 ಮತ್ತು 28ರಂದು ರಾಜ್ಯಕ್ಕೆ ಭೇಟಿ ನೀಡಲಿದೆ. ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತ ಉಮೇಶ್‌ ಸಿನ್ಹಾ ನೇತೃತ್ವದ ಮೂವರು ಅಧಿಕಾರಿಗಳ ತಂಡ ಎರಡು ದಿನಗಳ ಭೇಟಿ ನೀಡಲಿದ್ದು, ಚುನಾವಣಾ ಸಿದ್ಧತೆಗಳ ಪರಿಶೀಲನೆ ನಡೆಸಲಿದೆ. 

Advertisement

ಬಳಿಕ ಏಪ್ರಿಲ್‌ ಮೊದಲ ವಾರದಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್‌ ರಾವತ್‌ ರಾಜ್ಯಕ್ಕೆ ಅಂತಿಮ ಭೇಟಿ ನೀಡಲಿದ್ದು,ಚುನಾವಣೆಗೆ ಮುಹೂರ್ತ ನಿಗದಿಪಡಿಸಲಿದ್ದಾರೆ.

ಉಮೇಶ ಸಿನ್ಹಾ ನೇತೃತ್ವದ ತಂಡ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸೇರಿದಂತೆ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳಿಗೊಂದಿಗೆ ಸಭೆ ನಡೆಸಿ ಚುನಾವಣಾ ಸಿದ್ಧತೆಗಳ ಪರಿಶೀಲನೆ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next