Advertisement

ಕ್ರೀಡೆಗೆ ಕೇಂದ್ರ-ರಾಜ್ಯ ಸರ್ಕಾರಗಳ ಒತ್ತು

12:20 PM Mar 20, 2022 | Team Udayavani |

ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಖನಿಜ ನಿಧಿ , ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಡಿ ಸಿಂಥೆಟಿಕ್‌ ರನ್ನಿಂಗ್‌ ಟ್ರಾಫಿಕ್‌, ಸಿಂಥೆಟಿಕ್‌ ಹಾಕಿ ಕೋರ್ಟ್‌ ನಿರ್ಮಾಣ ಕಾಮಗಾರಿ ಸೇರಿದಂತೆ 5 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಶನಿವಾರ ಚಾಲನೆ ನೀಡಿದರು.

Advertisement

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದ ಅಡಿ 136.88 ಲಕ್ಷ ರೂ. ವೆಚ್ಚದಲ್ಲಿ ಸಿಂಥೆಟಿಕ್‌ ರನ್ನಿಂಗ್‌ ಟ್ರಾಕ್‌, 153.25ಲಕ್ಷ ರೂ. ವೆಚ್ಚದಲ್ಲಿ ಜಿಲ್ಲಾ ಕ್ರೀಡಾಂಗಣದ ಆಸನಗಳ ಸಾಮರ್ಥ್ಯ ಸುಧಾರಣೆ ಮತ್ತು ಬಂಡ್‌ ವರ್ಕ್‌, 2 ಕೋಟಿ ರೂ. ವೆಚ್ಚದಲ್ಲಿ ಸಿಂಥೆಟಿಕ್‌ ಟಫ್ರಿ೦ಗ್ ಕಾಮಗಾರಿ, 97.31ಲಕ್ಷ ರೂ. ವೆಚ್ಚದಲ್ಲಿ ಆರ್‌ ಸಿಸಿ ಡ್ರೈನ್‌ ಮತ್ತು ಅಪ್‌ಗ್ರೇಡೇಶನ್‌ ಆಫ್‌ ಫ್ಲಡ್‌ ಲೈಟ್ಸ್‌ ಮತ್ತು ಇತರ ಕಾಮಗಾರಿ, ಜಿಲ್ಲಾ ಖನಿಜ ನಿಧಿ ಅನುದಾನದಡಿ 2.70 ಕೋಟಿ ರೂ. ವೆಚ್ಚದಲ್ಲಿ ಸಿಂಥೆಟಿಕ್‌ ಹಾಕಿ ಕೋರ್ಟ್‌ ನಿರ್ಮಾಣ ಸೇರಿದಂತೆ 5 ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿ ಶುಭಹಾರೈಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಇಂದು ಕ್ರೀಡಾ ಸಂಸ್ಕೃತಿ ಬದಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಕ್ರೀಡೆಗಳಿಗೆ ಹಿಂದೆಂದೂ ಕೊಡದಷ್ಟು ಮಹತ್ವ ನೀಡಲಾಗುತ್ತಿದೆ. ರಾಜ್ಯದಲ್ಲಿ ಅತ್ಯಾಧುನಿಕ ಕ್ರೀಡಾ ಸಾಮಗ್ರಿ ಖರೀದಿಗೆ ಬಜೆಟ್‌ನಲ್ಲಿ 100 ಕೋಟಿ ಒದಗಿಸಲಾಗಿದೆ ಎಂದರು.

ರಾಜ್ಯದಲ್ಲಿ ಸ್ಥಳೀಯ ಕ್ರೀಡೆಗಳ ಉತ್ತೇಜನಕ್ಕೆ ಗ್ರಾಪಂ ಮಟ್ಟದಲ್ಲಿ 504 ಕೋಟಿ ವೆಚ್ಚದಲ್ಲಿ ಕ್ರೀಡಾ ಅಂಕಣಗಳನ್ನು ಸ್ಥಾಪಿಸಲು ಯೋಜನೆ ಘೋಷಣೆ ಆಗಿದೆ. 2024ರ ಒಲಿಂಪಿಕ್‌ಗೆ ನಮ್ಮ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಸಜ್ಜು ಮಾಡಲು 75 ಲಕ್ಷ ಅನುದಾನ ಕಾಯ್ದಿರಿಸಲಾಗಿದೆ ಎಂದು ವಿವರಿಸಿದ ಸಚಿವ ಬಿ.ಶ್ರೀರಾಮುಲು ಅವರು, ಹಿಂದೆಂದೂ ಕೊಡದ ಮಹತ್ವ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರೀಡಾರಂಗಕ್ಕೆ ನೀಡುತ್ತಿವೆ ಎಂದರು.

ಕ್ರೀಡೆಗೆ ಉತ್ತೇಜನ ನೀಡುವ ಮೂಲಕ ನಮ್ಮ ಸರಕಾರ ಆರೋಗ್ಯವಂತ ಸಮಾಜ ಹಾಗೂ ಆರೋಗ್ಯಕರ ಭಾರತ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಸೆಂಟರ್‌ ಫಾರ್‌ ಸ್ಪೋರ್ಟ್ಸ್ ಎಕ್ಸಲೆನ್ಸ್‌ ಸ್ಥಾಪಿಸುವ ಉದ್ದೇಶ ಇದ್ದು, ಈ ನಿಟ್ಟಿನಲ್ಲಿ ಇಂದಿನ ಕಾರ್ಯಕ್ರಮ ಉತ್ತಮ ಹೆಜ್ಜೆ ಆಗಲಿದೆ. ನಮ್ಮ ಮಕ್ಕಳು ಮುಂಬರುವ ದಿನಗಳಲ್ಲಿ ಈ ಎಲ್ಲ ವ್ಯವಸ್ಥೆಯ ಉಪಯೋಗ ಪಡೆದು, ಕ್ರೀಡಾ ರಂಗದಲ್ಲಿ ಜಿಲ್ಲೆಗೆ, ರಾಜ್ಯಕ್ಕೆ, ದೇಶಕ್ಕೆ ಕೀರ್ತಿ ತರುವಂತಾಗಲಿ ಎಂದು ಹಾರೈಸಿದರು.

Advertisement

ಕ್ರೀಡೆಗೆ ಸಂಬಂಧಿಸಿದಂತೆ 8.57 ಕೋಟಿ ವೆಚ್ಚದಡಿ 5 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅತ್ಯಂತ ಖುಷಿಯಿಂದ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ಈ ಮೂಲಕ ನಮ್ಮ ಜಿಲ್ಲೆಯ ಕ್ರೀಡಾ ವಲಯಕ್ಕೆ ಒಂದು ಭದ್ರ ಬುನಾದಿ ಹಾಕುತ್ತಿದ್ದೇವೆ ಎಂದರು. ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಮಾತನಾಡಿದರು. ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಜಿಪಂ ಸಿಇಒ ಲಿಂಗಮೂರ್ತಿ, ಎಸ್ಪಿ ಸೈದುಲು ಅಡಾವತ್‌, ಬುಡಾ ಅಧ್ಯಕ್ಷ ಪಾಲನ್ನ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಹರಿಸಿಂಗ್‌ ರಾಠೊಡ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮೋಹನ್‌ ಸೇರಿದಂತೆ ಸಾರ್ವಜನಿಕರು, ಕ್ರೀಡಾಪಟುಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next