Advertisement
ಅವರು ಶ್ರೀ ರಂಭಾಪುರಿ ಪೀಠದಲ್ಲಿ ಪ್ರಾರಂಭಗೊಂಡ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಜರುಗಿದ ಜನಜಾಗೃತಿ ಧರ್ಮೋತ್ತೇಜಕ ಸಮಾವೇಶದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಹೇಳಿದರು.
Related Articles
Advertisement
ಹರಪನಹಳ್ಳಿ ವರಸದ್ಯೋಜಾತ ಶ್ರೀಗಳು ಮಾತನಾಡಿ, ಜಗತ್ತಿನ ದಾರ್ಶನಿಕರಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಕೊಟ್ಟ ಸಂದೇಶ ನಮ್ಮೆಲ್ಲರ ಬಾಳಿನ ಬುತ್ತಿ ಎಂದರು.ನೇತೃತ್ವ ವಹಿಸಿದ ಎಡಿಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ಸುಮಧುರ ಜೀವನಕ್ಕಾಗಿ ಪ್ರತಿಯೊಬ್ಬರು ಧರ್ಮಾಚರಣೆಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು, ಸೂಡಿ ಜುಕ್ತಿ ಹಿರೇಮಠದ ಡಾ| ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು, ಎಸಳೂರು ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಉಪಸ್ಥಿತರಿದ್ದರು. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪುರಸ್ಕೃತ ಕಣ್ವಕುಪ್ಪಿ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು, ಸೋಲ್ಲಾಪುರ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ| ಈರಯ್ಯಸ್ವಾಮಿ, ಸುನೀತಾ ಸುಭಾಷ ಉಳ್ಳಾಗಡ್ಡಿ ಪುಣೆ, ಶಶಿಕಲಾ ಶಿವಶರಣಪ್ಪ ಸೀರಿ, ಚನ್ನಗಿರಿಯ ಎಂ.ಯು. ರಾಜಶೇಖರಯ್ಯ, ಗುರುಸಿದ್ಧಯ್ಯ ಹಿರೇಮಠ. ಸರಸ್ವತಿ ಎಲ್.ಎಂ. ಉಮಾಪತಿ ಮೊದಲಾದ ಗಣ್ಯರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಸನ್ಮಾನಿಸಿ ಗುರುರಕ್ಷೆ ನೀಡಿ ಶುಭ ಹಾರೈಸಿದರು. ನಮ್ರತಾ ಮತ್ತು ಭೂಮಿಕಾ ಸಹೋದರಿಯರು ಭರತ ನಾಟ್ಯ ಪ್ರದರ್ಶಿಸಿದರು. ಸಮಾರಂಭದ ನಂತರ ಶ್ರೀ ವೀರಭದ್ರಸ್ವಾಮಿ ಚಿಕ್ಕ ರಥೋತ್ಸವ ಸಂಭ್ರಮದಿಂದ ಜರುಗಿತು.