Advertisement

ಹೆದ್ದಾರಿ ಮದ್ಯ ಪ್ರವೇಶ: ಹೈಕೋರ್ಟ್‌ ನಕಾರ

08:25 AM Aug 23, 2017 | Harsha Rao |

ಬೆಂಗಳೂರು: ನಗರ ಪ್ರದೇಶದ ಮಧ್ಯೆ ಹಾದುಹೋಗಿರುವ ರಾಷ್ಟ್ರೀಯ ಹೆ¨ªಾರಿಗಳನ್ನು ಡಿನೋಟಿಫೈಗೊಳಿಸಿ ಪರವಾನಗಿ ನವೀಕರಿಸಲು ಅಬಕಾರಿ ಇಲಾಖೆಗೆ ನಿರ್ದೇಶಿಸುವಂತೆ ಕೋರಿದ್ದ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಮಾಲೀಕರು ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

Advertisement

ಈ ಮೂಲಕ ಮತ್ತೆ ಪುನರಾರಂಭಿಸುವ ನಿರೀಕ್ಷೆಯಲ್ಲಿ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ನೂರಾರು ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಮಾಲೀಕರ ಆಸೆಗೆ ತಣ್ಣೀರೆರೆಚಿದಂತಾಗಿದೆ. ಬೆಂಗಳೂರಿನ ಮಹಾತ್ಮಗಾಂಧಿ ರಸ್ತೆ, ರೆಸಿಡೆನ್ಸಿ ರಸ್ತೆ ಹಾಗೂ ಬ್ರಿಗೇಡ್‌ ರಸ್ತೆ ಸೇರಿ ವಿವಿಧ ಬಾರ್‌ ಮತ್ತು ರೆಸ್ಟೋರೆಂಟ್‌ಗಳ ಮಾಲೀಕರು ಸಲ್ಲಿಸಿದ್ದ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪು
ಕಾಯ್ದಿರಿಸಿದ್ದ ಹೈಕೋರ್ಟ್‌, ಸುಪ್ರೀಂಕೋರ್ಟ್‌ ಕಟ್ಟುನಿಟ್ಟಿನ ಸೂಚನೆ ಇರುವುದರಿಂದ ಈ ನ್ಯಾಯಪೀಠ ಅಬಕಾರಿ ಇಲಾಖೆಗೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ನಿರಾಕರಿಸಿತು.

ಅಬಕಾರಿ ಇಲಾಖೆ ಕ್ರಮ ಪ್ರಶ್ನಿಸಿದ್ದ ರಿಟ್‌ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾ. ವಿನೀತ್‌ ಕೊಠಾರಿ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ತೀರ್ಪು ನೀಡಿ, ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ನಿರ್ದೇಶನಗಳನ್ನು ಪಾಲಿಸಲು
ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆಯಿದೆ. ಹೀಗಾಗಿ ಈ ನ್ಯಾಯಪೀಠ ಕೂಡ, ಪರವಾನಗಿ ನವೀಕರಣ ಸಂಬಂಧ ಅಬಕಾರಿ ಇಲಾಖೆಗೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿತು.

ಕಂದಾಯ ಇಲಾಖೆ ದಾಖಲೆಗಳಲ್ಲಿ ಹೆದ್ದಾರಿ ವ್ಯಾಪ್ತಿಗೆ ಒಳಪಟ್ಟಿದೆ ಎಂಬ ಕಾರಣಕ್ಕೆ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳ ನವೀಕರಣ ಮಾಡಲು ರಾಜ್ಯ ಅಬಕಾರಿ ಇಲಾಖೆ ನಿರಾಕರಿಸಿದೆ. ಹೀಗಾಗಿ ನಗರದ ವ್ಯಾಪ್ತಿಯಲ್ಲಿರುವ 77.64 ಕಿ.ಮೀ.
ರಾಷ್ಟ್ರೀಯ ಹೆ¨ªಾರಿ ಮಾರ್ಗವನ್ನು ನಗರ ಪ್ರಾಧಿಕಾರ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಬ್ರಿಗೇಡ್‌ ರಸ್ತೆಯ ಫ್ಯೂಷನ್‌ ಲಾಂಜ್‌ ಆ್ಯಂಡ್‌ ರೆಸ್ಟೋರೆಂಟ್‌ ಸೇರಿ 20ಕ್ಕೂ ಹೆಚ್ಚು ಬಾರ್‌ ಮಾಲೀಕರು ಹೈಕೋರ್ಟ್‌ ಮೊರೆ ಹೋಗಿದ್ದರು.

ನಿಲುವು ಏನಾಗಿತ್ತು?
ನಗರ ಪ್ರದೇಶಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಡಿನೋಟಿಫೈ ಮಾಡಿದೆ. ಸ್ಥಳೀಯ ಪ್ರಾಧಿಕಾರಿಗಳು ನಿರ್ವಹಣೆ ಮಾಡುತ್ತಿರುವ ರಸ್ತೆಗಳನ್ನು ರಾಜ್ಯ ಸರ್ಕಾರ ಡಿನೋಟಿಫೈ ಮಾಡಿದೆ. ಕಂದಾಯ ಇಲಾಖೆಯ ದಾಖಲೆಗಳ ಪ್ರಕಾರ ಇನ್ನೂ ಹೆದ್ದಾರಿ ಎಂದೇ ಗುರುತಿಸಲ್ಪಟ್ಟಿರುವ ರಾಷ್ಟ್ರೀಯ ಹೆದ್ದಾರಿ-4
ಹಾಗೂ ರಾಷ್ಟ್ರೀಯ ಹೆದ್ದಾರಿ- 77 ಕೇಂದ್ರ ಸರ್ಕಾರದ ಡಿನೋಟಿಫೈ ಅಧಿಸೂಚನೆಯಲ್ಲಿ ಉಲ್ಲೇಖೀಸಲಾಗಿಲ್ಲ.
ಈ ರಸ್ತೆಗಳನ್ನು ಡಿನೋಟಿಫೈ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಹೀಗಾಗಿ ನಗರ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆ¨ªಾರಿಗಳನ್ನು ಸ್ಥಳೀಯ ಅಥವಾ ನಗರ ಪ್ರಾಧಿಕಾರ ವ್ಯಾಪ್ತಿಯ ರಸ್ತೆ ಎಂದು ಘೋಷಿಸಲು ಕೋರಿ ರಾಜ್ಯ ಸರ್ಕಾರ ಜುಲೈ 31ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆ¨ªಾರಿ ಸಚಿವಾಲಯಕ್ಕೆ ಪತ್ರ ಬರೆದಿತ್ತು. ರಾಜ್ಯ ಸರ್ಕಾರದ ಈ ಪ್ರಸ್ತಾವನೆ ತಿರಸ್ಕರಿಸಿದ್ದ ಕೇಂದ್ರಸರ್ಕಾರ, ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ
ಹಾದು ಹೋಗಿರುವ ರಸ್ತೆಗಳಿಗೆ ವಿನಾಯಿತಿ ನೀಡಿದರೆ ಸಾರ್ವಜನಿಕ ಸುರûಾ ನೀತಿಯ ಮುಖ್ಯ ಉದ್ದೇಶವೇ
ವಿಫ‌ಲವಾದಂತಾಗುತ್ತದೆ. ಹೀಗಾಗಿ ಸಂವಿಧಾನದ 142ನೇ ವಿಧಿಯ ಅನುಸಾರ ಸುಪ್ರೀಂಕೋರ್ಟ್‌ ನೀಡಿರುವ ನಿರ್ದೇಶನಗಳನ್ನು ಪಾಲಿಸುವುದು ಅವಶ್ಯವಿದೆ. 609.65 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಡಿನೋಟಿಫೈ ಮಾಡಲು ಸಾಧ್ಯವಿಲ್ಲ ಎಂದು ಆಗಸ್ಟ್‌ 14ರಂದು ಉತ್ತರ ನೀಡಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next