ಮಂಡ್ಯ: ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿದ್ಯುತ್ ತಂತಿ ಹಿಡಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ. ಆರ್.ಪೇಟೆ ತಾಲೂಕು ಬೂಕನಕೆರೆ ಹೋಬಳಿಯ ಕಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ಚಿಕ್ಕಲಿಂಗಪ್ಪ(58) ಪ್ರವಹಿಸುತ್ತಿದ್ದ ವಿದ್ಯುತ್ ತಂತಿ ಹಿಡಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಈತ ಒಟ್ಟು 38 ಗುಂಟೆ ಜಮೀನು ಹೊಂದಿದ್ದು, ಬೆಳೆ ಬೆಳೆಯುವುದಕ್ಕಾಗಿ ಹಲವು ಮೈಕ್ರೋ ಫೈನಾನ್ಸ್ ಕಂಪನಿಗಳಿoದ ಸುಮಾರು 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಹಣ ಕಟ್ಟಲಾಗದೆ ಸಾಲಕ್ಕೆ ಹೆದರಿ ಗ್ರಾಮದಲ್ಲಿಯೇ ವಿದ್ಯುತ್ ತಂತಿಗಳನ್ನು ಹಿಡಿದುಕೊಂಡು ಸಾವಿಗೆ ಶರಣಾಗಿದ್ದಾರೆ. ನಂತರ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ:ಸಚಿವ ಸಂಪುಟ ಅಸಮಾಧಾನ: ಮಾರ್ಗದಲ್ಲಿ ನಿಂತು ಅಪಸ್ವರ ತೆಗೆಯೋ ಅವಶ್ಯಕತೆ ಇಲ್ಲ ಎಂದ ನಳಿನ್
ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ:ದಕ್ಷಿಣಕನ್ನಡ ಜಿಲ್ಲೆಯ 6 ಕೇಂದ್ರಗಳಲ್ಲಿ ನಾಳೆಯಿಂದ ಲಸಿಕೆ ವಿತರಣೆ: ಜಿಲ್ಲಾಧಿಕಾರಿ ಮಾಹಿತಿ