Advertisement

Aligarh Muslim University: ವಿದ್ಯಾರ್ಥಿನಿಯರು ಅಸ್ವಸ್ಥ ಆಸ್ಪತ್ರೆಗೆ ದಾಖಲು

08:15 PM Oct 18, 2023 | Team Udayavani |

ಅಲಿಗಢ: ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿವಿಯ ಹಾಸ್ಟೆಲ್‌ನಲ್ಲಿ 300 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ನಡೆದಿದೆ. ಆಹಾರದಲ್ಲಿ ಕಲಬೆರಕೆ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಉಂಟಾಗಿದೆ. ಅಸ್ವಸ್ಥರಾಗಿರುವ ವಿದ್ಯಾರ್ಥಿನಿಯರನ್ನು ವಿವಿಯ ಜವಾಹರ್‌ಲಾಲ್‌ ನೆಹರೂ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Advertisement

ಮಧ್ಯಾಹ್ನದ ವೇಳೆಗೆ ಅವರ ಆರೋಗ್ಯದ ಸ್ಥಿತಿ ಸುಧಾರಣೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಡಿಸ್ಚಾರ್ಜ್‌ ಮಾಡಲಾಗಿದೆ. ಜಿಲ್ಲಾಡಳಿತ ವಿದ್ಯಾರ್ಥಿನಿ ನಿಲಯದಿಂದ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next