ಶ್ರೀರಂಗಪಟ್ಟಣ: ತಾಲೂಕಿನ ವಿವಿಧೆಡೆ ಅನ ಧಿಕೃತವಾಗಿ ಗಣಿಗಾರಿಕೆ ನಡೆಯುತ್ತಿದ್ದರೂ ಸಂಬಂಧಿ ಸಿದ ಅಧಿಕಾರಿಗಳು ಕಡಿವಾಣ ಹಾಕದೆ ಜಾಣ ಮೌನ ವಹಿಸಿರುವುದು ಗಣಿಗಾರಿಕೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಅನುಮಾನ ಉಂಟು ಮಾಡಿದೆ.
ಸುರಂಗದ ಮೇಲ್ಭಾಗದಲ್ಲಿ ಕ್ರಷರ್: ಮಳವಳ್ಳಿಗೆ ಹೋಗುವ ವಿ.ಸಿ.ನಾಲೆಯ ಸಂಪರ್ಕ ನಾಲೆಯ ಸುರಂಗದ ಬಳಿಯಲ್ಲೇ ನಂದಿಶ್‌ಗೆ ಸೇರಿದ ಎಂ.ಸ್ಯಾಂಡ್ ಘಟಕ ತಲೆ ಎತ್ತಿದ್ದು ಅದರ ಕೆಳಭಾಗದಲ್ಲಿ ಸುರಂಗ ಹಾದು ಹೋಗಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಒಂದು ವೇಳೆ ಸುರಂಗಕ್ಕೆ ಧಕ್ಕೆಯಾದರೆ ಯಾರು ಹೊಣೆ?
ಅಧಿಕಾರಿಗಳ ವೈಫಲ್ಯ: ಅನೇಕ ಬಾರಿ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಮನವಿ ಸಲ್ಲಿಸಿದರೂ, ಜಿಲ್ಲಾಧಿಕಾರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ , ಜಿಲ್ಲಾ ಹಾಗೂ ತಾಲೂಕು ಮಟ್ಟದ ಅರಣ್ಯ ಅಧಿಕಾರಿಗಳು ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಅರಣ್ಯ ಪ್ರದೇಶದಲ್ಲಿ ಜೆಲ್ಲಿ ಕ್ರಷರ್ ಹಾಗೂ ಗಣಿಗಾರಿಕೆ ನಡೆಯುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಹಂಗರಹಳ್ಳಿ, ಮುಂಡುಗದೊರೆ, ನೀಲನಕೊಪ್ಪಲು, ಕಾಳೇನಹಳ್ಳಿ ವ್ಯಾಪ್ತಿಯಲ್ಲಿರುವ ಗಣಿಗಾರಿಕೆ ನಡೆಸುವಾಗ ಬಾರಿ ಸಿಡಿಮದ್ದು ಸೇರಿದಂತೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ಅಕ್ಕಪಕ್ಕದ ಗ್ರಾಮಗಳ ಮನೆ ಗೋಡೆ ಬಿರುಕು ಬಿಟ್ಟಿರುವ ಬಗ್ಗೆ ವರದಿ ಬಂದಿದ್ದರೂ ಅಧಿಕಾರಿಗಳು ಕಡಿವಾಣ ಹಾಕುವಲ್ಲಿ ವಿಫಲರಾಗಿದ್ದಾರೆ.
ಎಚ್ಚರಿಕೆ: ಟಿ.ಎಂ.ಹೊಸೂರು, ಕಾಳೇನಹಳ್ಳಿ, ಹಂಗರಳ್ಳಿ , ಗಣಂಗೂರು, ಸೇರಿದಂತೆ ಇತರ ಗ್ರಾಮದ ಸರ್ಕಾರಿ ಭೂಮಿಯಲ್ಲಿ ಅನಧಿಕೃತ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಹಲವು ಬಾರಿ ಜಿಲ್ಲಾಧಿಕಾರಿ, ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈಗಲಾದರೂ ಎಚ್ಚೆತ್ತು ಕ್ರಮ ವಹಿಸಿ ಅಕ್ರಮ ಗಣಿಗಾರಿಕೆ ತಡೆಯಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದು ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಂಜೇಶ್‌ಗೌಡ ಎಚ್ಚರಿಸಿದರು.
Advertisement
ತಾಲೂಕಿನ ಟಿಎಂ.ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಿಯಾಲ-ಆಲಗೂಡು ರಸ್ತೆಯ ಜಕ್ಕನಹಳ್ಳಿ, ಕಾಳೇನಹಳ್ಳಿ ಶೆಡ್ಡು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಬಳಿ ಪರವಾನಗಿ ಇಲ್ಲದೆ ಅನಧಿಕೃತ ಕ್ರಷರ್‌ಗಳು ತಲೆ ಎತ್ತಿದ್ದರೂ ಅಧಿಕಾರಿಗಳು ಕಂಡರೂ ಕಾಣದಂತಿರುವುದು ಅನುಮಾನಕ್ಕೆಡೆ ಮಾಡಿಕೊಟ್ಟಿದೆ.
Related Articles
Advertisement