Advertisement

ಮತದಾರರ ಅಂತಿಮ ಪಟ್ಟಿ ಪ್ರಕಟ: ಡಿಸಿ ಕವಿತಾ

06:15 PM Jan 20, 2021 | Team Udayavani |

ಚಿತ್ರದುರ್ಗ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗಿದ್ದು, ಇದರ ಅಂತಿಮ ಪಟ್ಟಿಯನ್ನು ಜ. 18 ರಂದು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ತಿಳಿಸಿದರು.

Advertisement

ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸುವ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿ ಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. 2020ರ ನವೆಂಬರ್‌ 18 ರಿಂದ ಡಿಸೆಂಬರ್‌ 17 ರವರೆಗೆ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗಿದೆ. ಈ ಅವಧಿ ಯಲ್ಲಿ ಹೊಸ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ಕೈಬಿಡುವುದು ಸೇರಿದಂತೆ ಮಾರ್ಪಾಡಿಗೂ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರಿಂದ ಬಂದ ಅರ್ಜಿಗಳನ್ನು ಸ್ವೀಕರಿಸಿ ಪರಿಷ್ಕರಣೆ ಮಾಡಲಾಗಿದೆ. ಎಲ್ಲಾ ಅರ್ಜಿಗಳ ಪರಿಶೀಲನೆ ನಡೆಸಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ.

ಇದನ್ನೂ ಓದಿ:ಕೇಂದ್ರದ ನೀತಿ ರೈತರು-ಕಾರ್ಮಿಕರಿಗೆ ಮರಣ ಶಾಸನ

ಅಂತಿಮ ಪಟ್ಟಿಯನ್ನು ಎಲ್ಲಾ ಮತಗಟ್ಟೆಗಳಲ್ಲಿ ಹಾಗೂ ತಾಲೂಕು ಕಚೇರಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಯಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಯನ್ನು ಎಲ್ಲಾ ಮತದಾರರು ಪರಿಶೀಲಿಸಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು ಎಂದರು. ಮತದಾರರ ಪಟ್ಟಿ ಪರಿಷ್ಕರಣೆ ನಿರಂತರವಾಗಿ ನಡೆಯುತ್ತಿದ್ದು ಹೊಸದಾಗಿ ಸೇರ್ಪಡೆ, ತಿದ್ದುಪಡಿ, ವರ್ಗಾವಣೆಗೆ ಅವಕಾಶ ಇರುತ್ತದೆ. ಆದ್ದರಿಂದ ಸಾರ್ವಜನಿಕರು ಪಟ್ಟಿಯನ್ನು ಪರಿಶೀಲಿಸಿಕೊಳ್ಳಬೇಕು. ಈ ಬಗ್ಗೆ ರಾಜಕೀಯ ಪಕ್ಷಗಳು ತಮ್ಮ ಮತಗಟ್ಟೆ ಏಜೆಂಟರ ಮೂಲಕವೂ ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸುವಂತೆ ತಿಳಿಸಿದರು.

ಜ. 18 ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯ ಒಟ್ಟು 1648 ಮತಗಟ್ಟೆಗಳಿಂದ 13,71,454 ಮತದಾರರಿದ್ದಾರೆ. ಇದರಲ್ಲಿ 6,88,485 ಪುರುಷ, 6,82,886 ಮಹಿಳೆಯರು ಹಾಗೂ 83 ಇತರೆ ಮತದಾರರಿದ್ದಾರೆ. ನವೆಂಬರ್‌ 18 ರಂದು ಪ್ರಕಟಿಸಲಾದ ಕರಡು ಪಟ್ಟಿ ಅನ್ವಯ 6,83,836 ಪುರುಷ, 6,78,057 ಮಹಿಳೆಯರು ಹಾಗೂ 80 ಇತರೆ ಸೇರಿ 13,61,973 ಮತದಾರರಿದ್ದರು. ಪರಿಷ್ಕರಣೆ ನಂತರ ಅಂತಿಮವಾಗಿ 9481 ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಕರಡು ಮತದಾರರ ಪಟ್ಟಿಯನ್ವಯ 10,942 ಯುವ ಮತದಾರರಿದ್ದು, ಅಂತಿಮ ಪಟ್ಟಿಯನ್ವಯ ಈ ಸಂಖ್ಯೆ 19,018ಕ್ಕೆ ಏರಿಕೆಯಾಗಿದೆ ಹಾಗೂ 392 ಸೇವಾ ಮತದಾರರು ನೊಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು.

Advertisement

ಎಲ್ಲಾ ರಾಜಕೀಯ ಪಕ್ಷಗಳು ಮತಗಟ್ಟೆ ವ್ಯಾಪ್ತಿಯಲ್ಲಿ ಏಜೆಂಟರನ್ನು ನೇಮಕ ಮಾಡಬೇಕು. ಆದಷ್ಟು ಬೇಗ ಪಟ್ಟಿ ನೀಡಬೇಕೆಂದು ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next