ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸುವ ಸಮಿತಿಯ ಸಭೆ ಸೋಮವಾರ ಸಂಸದ ಎಂ.ವೀರಪ್ಪ ಮೊಯ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
Advertisement
ಕಾರ್ಯಕ್ರಮಗಳಲ್ಲಿ ಏನೆಲ್ಲಾ ಅಂಶಗಳಿರಬೇಕು ಎಂಬ ಬಗ್ಗೆಯೂ ಸಮಾಲೋಚನೆ ನಡೆಯಿತು. ಸಭೆ ಬಳಿಕ ಮಾತನಾಡಿದ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ, ಸಭೆಯಲ್ಲಿ ಸಾಲ ಮನ್ನಾ, ಸಾಮಾನ್ಯ ಕಾರ್ಯಕ್ರಮಗಳುಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಿದ್ದು, ಜೂ.29ರಂದು ಅಂತಿಮ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಬಳಿಕ ಪಟ್ಟಿ ಹೊರ ಬೀಳಲಿದೆ ಎಂದು ಹೇಳಿದರು.
ಅವಧಿಯಲ್ಲಿ ಹಂತ ಹಂತವಾಗಿ ಎಲ್ಲವನ್ನೂ ಜಾರಿ ಮಾಡುತ್ತೇವೆ.
– ಆರ್.ವಿ.ದೇಶಪಾಂಡೆ,
ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ಸದಸ್ಯ