Advertisement

New Medical ಕಾಲೇಜಿಗೆ ಆರ್ಥಿಕ ಇಲಾಖೆ ಅನುಮತಿ ಸಿಕ್ಕಿಲ್ಲ:ಸಚಿವ ಡಾ| ಶರಣಪ್ರಕಾಶ ಪಾಟೀಲ್‌

11:19 PM Jul 31, 2024 | Team Udayavani |

ಬಾಗಲಕೋಟೆ: ರಾಜ್ಯದಲ್ಲಿ ಈಗಾಗಲೇ ಘೋಷಿಸಿದ 9 ಹೊಸ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಆರ್ಥಿಕ ಇಲಾಖೆ ಅನುಮತಿ ಸಿಕ್ಕಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ್‌ ಹೇಳಿದರು.

Advertisement

ಬಾಡಗಂಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಾಗಲಕೋಟೆ ಜಿಲ್ಲೆಯೂ ಸೇರಿದಂತೆ 9 ಹೊಸ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕಿದೆ. ಆದರೆ ಆರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ.

ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ಉದ್ದೇಶ ನಮಗಿದೆ. ಆದರೆ, ಹಣಕಾಸಿನ ವ್ಯವಸ್ಥೆ ಆಗಬೇಕಾಗುತ್ತದೆ. ಸದ್ಯ ಹೊಸ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಚಿಂತನೆ ಇಲ್ಲ. ಆರ್ಥಿಕ ಇಲಾಖೆಯ ಅನುಮತಿ ಸಿಕ್ಕಲ್ಲಿ ಈಗಾಗಲೇ ಘೋಷಿಸಿದ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು.

ಈಗಾಗಲೇ ಇರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳಲ್ಲಿ ಕೆಲವು ನ್ಯೂನತೆಗಳಿವೆ. ಹೀಗಾಗಿ ರಾಷ್ಟ್ರೀಯ ವೈದ್ಯಕೀಯ ಮಂಡಳಿ ದಂಡ ವಿಧಿಸಿದೆ. ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next