ನಂಜನಗೂಡು: ತಾಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಪೈರಾ ಫ್ಲೆಕ್ಸಿ ಪ್ಯಾಕ್ ಕಾರ್ಖಾನೆ ಘಟಕ ಸಂಪೂರ್ಣ ಭಸ್ಮವಾಗಿದ್ದು, ಅದೃಷ್ಟವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಂಕ್‌ಫುಡ್‌ಗಳ ಪ್ಯಾಕಿಂಗ್ ಮಾಡಲು ಪ್ಲಾಸ್ಟಿಕ್ ಕವರ್‌ಗಳನ್ನು ತಯಾರಿಸುವ ಈ ಕಾರ್ಖಾನೆಯಲ್ಲಿ ಸೋಮವಾರ ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಕಾರ್ಖಾನೆಯ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿವೆ. ಈ ವೇಳೆ ಸ್ಥಳದಲ್ಲಿದ್ದ ಕಾರ್ಮಿಕರು ಬೆಂಕಿಯನ್ನು ನಂದಿಸಲು ಮುಂದಾದರಾದರೂ ಅಗ್ನಿ ಜಾÌಲೆ ವ್ಯಾಪಿಸಿಕೊಂಡು ದಟ್ಟ ಹೊಗೆ ಕಾಣಿಸಿಕೊಂಡಿದ್ದರಿಂದ ಕಾರ್ಖಾನೆ ಘಟಕ ಸುಟ್ಟು ಹೋಗಿದೆ. ಕಾರ್ಮಿಕರು ಕಾರ್ಖಾನೆಯಿಂದ ಹೊರ ಬಂದು ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಸುಮಾರು 3.30ರ ಸಮಯದಲ್ಲಿ ಮೈಸೂರಿನಿಂದ 5, ನಂಜನಗೂಡು ಪಟ್ಟಣದಿಂದ 2 ಹಾಗೂ ಜುಬಿಲೆಂಟ್ ಕಾರ್ಖಾನೆಯಿಂದ 1 ಅಗ್ನಿ ನಂದಿಸುವ ವಾಹನದೊಂದಿಗೆ ಆಗಮಿಸಿದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಸೋಮವಾರ ಮಧ್ಯಾಹ್ನ 1ರವರೆಗೂ ನಿರಂತರವಾಗಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಯಿತು.
ವಿದ್ಯುತ್ ಸ್ಪರ್ಶ: ವಿದ್ಯುತ್ ಶಾರ್ಟ್ ಸರ್ಕ್ನೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಕಾರ್ಖಾನೆ ಉಪಾಧ್ಯಕ್ಷ ಬಿ.ಎಲ್.ಮೆಹತಾ ತಿಳಿಸಿದ್ದಾರೆ. ಕಾರ್ಖಾನೆಯಲ್ಲಿ 300 ಕಾರ್ಮಿಕರು ಕೆಲಸ ಮಾಡುತ್ತಿದ್ದು, ಭಾನುವಾರ ರಜೆ ಇದ್ದ ಕಾರಣ ಕೇವಲ 25 ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು ಎಂದರು.
ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ನಂಜನಗೂಡು ಶಾಖಾಧಿಕಾರಿ ಬಾಬು, ಗ್ರಾಮಾಂತರ ಪಿಎಸ್ಸೆ„ ಪುನೀತ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.